ADVERTISEMENT

ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಇಂದಿರಾ

ಇಂದಿರಾ ಗಾಂಧಿ ಪುಣ್ಯತಿಥಿ ಕಾರ್ಯಕ್ರಮದಲ್ಲಿ ರಮಾನಾಥ ರೈ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2020, 16:01 IST
Last Updated 31 ಅಕ್ಟೋಬರ್ 2020, 16:01 IST
ಮಂಗಳೂರಿನ ಕಾಂಗ್ರೆಸ್‌ ಕಚೇರಿಯಲ್ಲಿ ಇಂದಿರಾ ಗಾಂಧಿ ಹಾಗೂ ವಲ್ಲಭಭಾಯಿ ಪಟೇಲ್‌ರ ಭಾವಚಿತ್ರಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಪುಷ್ಪಾರ್ಪಣೆ ಮಾಡಿದರು.
ಮಂಗಳೂರಿನ ಕಾಂಗ್ರೆಸ್‌ ಕಚೇರಿಯಲ್ಲಿ ಇಂದಿರಾ ಗಾಂಧಿ ಹಾಗೂ ವಲ್ಲಭಭಾಯಿ ಪಟೇಲ್‌ರ ಭಾವಚಿತ್ರಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಪುಷ್ಪಾರ್ಪಣೆ ಮಾಡಿದರು.   

ಮಂಗಳೂರು: ದೇಶದ ಪ್ರಧಾನಿಯಾಗಿದ್ದಾಗ ಇಂದಿರಾ ಗಾಂಧಿ ಅವರು ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬಡವರ ಪಾಲಿಗೆ ಕಣ್ಮಣಿಯಾಗಿದ್ದರು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಸ್ಮರಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಇಂದಿರಾಗಾಂಧಿ ಪುಣ್ಯತಿಥಿ ಹಾಗೂ ಸರ್ದಾರ ವಲ್ಲಭಭಾಯಿ ಪಟೇಲ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇಂದಿರಾ ಗಾಂಧಿ ಅವರು ಅಧಿಕಾರಕ್ಕೆ ಬಂದ ಬಳಿಕ ಸಮಾಜದ ದುರ್ಬಲ ವರ್ಗದ ಶ್ರೇಯೋಭಿವೃದ್ಧಿಗೆ ಹೋರಾಟ ಮಾಡಿದರು. ಇಂದಿರಾ ಅವರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದನ್ನು ಇಂದು ಸಂಘ ಪರಿವಾರ ಅರ್ಥ ಮಾಡಿಕೊಳ್ಳಬೇಕು. ದೇಶದಲ್ಲಿ ಭಯೋತ್ಪಾದನೆಗೆ ಮೊದಲು ಆಹುತಿಯಾಗಿದ್ದರೆ ಅದು ಕಾಂಗ್ರೆಸ್ ಮುಖಂಡರು’ ಎಂದು ಹೇಳಿದರು.

ADVERTISEMENT

ಪಾಲಿಕೆ ಪ್ರತಿಪಕ್ಷದ ನಾಯಕ ಅಬ್ದುಲ್ ರವೂಫ್, ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೊ, ಜಿಲ್ಲಾ ಪಂಚಾಯಿತಿ ಸದಸ್ಯ ಶಾಹುಲ್ ಹಮೀದ್, ಕಿಸಾನ್ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಮೋಹನ್ ಗೌಡ, ಎನ್‌ಎಸ್‌ಐಯು ಜಿಲ್ಲಾ ಘಟಕದ ಅಧ್ಯಕ್ಷ ಸವಾದ್ ಸುಳ್ಯ, ಸೇವಾದಳದ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ, ಪ್ರತಿಭಾ ಕುಳಾಯಿ ಉಪಸ್ಥಿತರಿದ್ದರು. ಸದಾಶಿವ್ ಉಳ್ಳಾಲ್ ಸ್ವಾಗತಿಸಿ, ನಿರೂಪಿಸಿದರು. ಶಶಿಧರ್ ಹೆಗ್ಡೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.