ADVERTISEMENT

ನರ್ಸಿಂಗ್ ವಸತಿ ನಿಲಯ ಉದ್ಘಾಟನೆ: ಮಹಿಳಾ ಸಬಲೀಕರಣಕ್ಕೆ ಒತ್ತು: ದಿನೇಶ್ ಗುಂಡೂರಾವ್

​ಪ್ರಜಾವಾಣಿ ವಾರ್ತೆ
Published 25 ಜುಲೈ 2025, 7:43 IST
Last Updated 25 ಜುಲೈ 2025, 7:43 IST
<div class="paragraphs"><p>ದಿನೇಶ್ ಗುಂಡೂರಾವ್</p></div>

ದಿನೇಶ್ ಗುಂಡೂರಾವ್

   

ಮಂಗಳೂರು: ನಗರದ ಉರ್ವಸ್ಟೋರಿನಲ್ಲಿ ₹5 ಕೋಟಿ ವೆಚ್ಚದಲ್ಲಿ ನಿರ್ಮಾಣ ವಾಗಿರುವ ಶ್ರೀಮತಿ‌ ಇಂದಿರಾ ಗಾಂಧಿ ಮಹಿಳಾ ನರ್ಸಿಂಗ್ ವಸತಿ ನಿಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ‌ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ಮಾದರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ADVERTISEMENT

ನಂತರ ಮಾತನಾಡಿದ ಅವರು, ಉನ್ನತ ಶಿಕ್ಷಣಕ್ಕಾಗಿ ಬೇರೆ ಜಿಲ್ಲೆಗಳ ವಿದ್ಯಾರ್ಥಿಗಳು ದಕ್ಷಿಣ ಕನ್ನಡ ಜಿಲ್ಲೆಗೆ ಬರುತ್ತಾರೆ. ಹಾಗಾಗಿ ಇಲ್ಲಿ ಹಾಸ್ಟೆಲ್ ಗಳಿಗೆ ಬೇಡಿಕೆ ಹೆಚ್ಚಿದೆ. ವಿದ್ಯಾರ್ಥಿನಿಯರು ಶೈಕ್ಷಣಿಕ ವಾಗಿ ಮುಂದೆ ಬರಬೇಕು. ಕಲಿಕೆಯಲ್ಲಿ ವಿದ್ಯಾರ್ಥಿನಿಯರು ಸದಾ ಮುಂಚೂಣಿಯಲ್ಲಿರುತ್ತಾರೆ, ಅವರಿಗೆ ಪೂರಕ ಅವಕಾಶವನ್ನು ನಾವು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿದೆ ಎಂದರು.

ಹಿಂದೆ ಎಸ್‌.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಸ್ತ್ರೀ ಶಕ್ತಿ ಗುಂಪು ರಚನೆಯ ಪರಿಕಲ್ಪನೆ ಅನುಷ್ಠಾನಗೊಂಡಿತು. ಮಹಿಳಾ ಸಬಲೀಕರಣಕ್ಕೆ ಕಾಂಗ್ರೆಸ್ ಸರ್ಕಾರ ಸಾಕಷ್ಟು ಕಾರ್ಯಕ್ರಮ‌ಗಳನ್ನು ಜಾರಿಗೊಳಿಸಿದೆ ಎಂದು ಹೇಳಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ನಿರ್ಮಾಣವಾದ ಡಿ. ದೇವರಾಜ ಅರಸು ಭವನವನ್ನು ಸಚಿವರು ಉದ್ಘಾಟಿಸಿದರು.

ಶಾಸಕ‌ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾಧಿಕಾರಿ ದರ್ಶನ್‌‌ ಎಚ್.ವಿ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ‌ವಿನಾಯಕ್ ನರ್ವಾಡೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿಂದಿಯಾ ನಾಯಕ್ ಉಪಸ್ಥಿತರಿದ್ದರು.‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.