ADVERTISEMENT

ಮಂಗಳೂರು | ಬೆಳ್ಳಿಹಬ್ಬದ ಸಂಭ್ರಮದಲ್ಲಿ ಇಂದಿರಾ ಆಸ್ಪತ್ರೆ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2024, 4:25 IST
Last Updated 13 ಆಗಸ್ಟ್ 2024, 4:25 IST
ಇಂದಿರಾ ಆಸ್ಪತ್ರೆ
ಇಂದಿರಾ ಆಸ್ಪತ್ರೆ   

ಮಂಗಳೂರು: ನಗರದ ಇಂದಿರಾ ಆಸ್ಪತ್ರೆ 25ನೇ ವಾರ್ಷಿಕೋತ್ಸವ ಆಚರಿಸಲು ಸಜ್ಜಾಗಿದ್ದು ಇದೇ 15ರಂದು ಸಂಜೆ 5 ಗಂಟೆಗೆ ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಾರ್ಷಿಕ ಸಂಭ್ರಮ ನಡೆಯಲಿದೆ.

ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಯೆನೆಪೋಯ ವಿಶ್ವವಿದ್ಯಾಲಯದ ಕುಲಪತಿ ಅಬ್ದುಲ್ಲ ಕುಂಞಿ ಮತ್ತು ರಾಜೀವಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ. ರಿಯಾಜ್ ಬಾಷಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

1999ರಲ್ಲಿ ಸ್ಥಾಪನೆಯಾದ ಆಸ್ಪತ್ರೆ ತುರ್ತು ಚಿಕಿತ್ಸಾ ವಿಭಾಗ, ಶಸ್ತ್ರಚಿಕಿತ್ಸೆ, ಡಯಾಲಿಸಿಸ್, ಮೆಟರ್ನಿಟಿ, ಮೆಡಿಸಿನ್, ಫಿಸಿಯೊಥೆರಪಿ ಮತ್ತಿತರ ಸೌಲಭ್ಯಗಳನ್ನು ಹೊಂದಿದೆ. ಇಂದಿರಾ ಎಜುಕೇಷನಲ್ ಟ್ರಸ್ಟ್‌ನಲ್ಲಿ ನರ್ಸಿಂಗ್, ಅಲೈಡ್ ಆರೋಗ್ಯ ಮತ್ತು ಫಿಸಿಯೊಥೆರಪಿ ಕೋರ್ಸ್‌ಗಳು ಇವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.