ADVERTISEMENT

ಕೋವಿಡ್ ಬಾಧಿತರಿದ್ದ ಅಪಾರ್ಟ್ಮೆಂಟ್ ನಿವಾಸಿಗಳಿಗೂ ತಪಾಸಣೆ: ಪಾಲಿಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2021, 9:07 IST
Last Updated 10 ಜೂನ್ 2021, 9:07 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ವಸತಿ ಸಮುಚ್ಚಯ, ಅಪಾರ್ಟ್ಮೆಂಟ್ಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾದರೆ ಸಮುಚ್ಚಯದ ಎಲ್ಲ ನಿವಾಸಿಗಳನ್ನು ಪ್ರಾಥಮಿಕ ಸಂಪರ್ಕಿತರು ಎಂದು ಪರಿಗಣಿಸಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಆಯುಕ್ತ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.

ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ -19 ಪಾಸಿಟಿವ್ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರಸ್ತುತ ಇರುವ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ.

ಕೋವಿಡ್ ಪಾಸಿಟಿವ್ ಪ್ರಮಾಣವನ್ನು ಕಡಿಮೆಗೊಳಿಸಲು ತೀವ್ರ ಪ್ರಯತ್ನ ನಡೆದಿದ್ದು, ಇದರ ಭಾಗವಾಗಿ ವಸತಿ ಸಮುಚ್ಚಯ, ಅಪಾರ್ಟ್‌ಮೆಂಟ್‌ಗಳನಿವಾಸಿಗಳು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

ADVERTISEMENT

ಮಹಾನಗರಪಾಲಿಕೆ ವ್ಯಾಪ್ತಿಯೊಳಗೆ ಶೇ 17 ರಷ್ಟು ಕೋವಿಡ್ ಸೋಂಕಿತರ ಪ್ರಮಾಣ ವರದಿಯಾಗುತ್ತಿದ್ದು, ಇದನ್ನು ತಗ್ಗಿಸಲು ಕೋವಿಡ್ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಿ, ಸೋಕಿತರ ಪ್ರಾಥಮಿಕ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.

ಪ್ಲ್ಯಾಟ್ ಮಾಲೀಕರು, ನಿವಾಸಿಗಳ ಒಕ್ಕೂಟ ( ಅಸೋಸಿಯೇಷನ್ ) ಮತ್ತು ವಸತಿ ಸಮುಚ್ಚಯದ ಎಲ್ಲಾ ನಿವಾಸಿಗಳ ಸಂಪೂರ್ಣ ಸಹಕಾರವನ್ನು ಆಯುಕ್ತ ಅಕ್ಷಯ್ ಶ್ರೀಧರ್ ಕೋರಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.