ADVERTISEMENT

ಅಂತರರಾಷ್ಟ್ರೀಯ ಸ್ಯಾಕ್ಸೊಫೋನ್ ಕಲಾವಿದ ಮಚ್ಚೇಂದ್ರನಾಥ್ ಕೋವಿಡ್‌ನಿಂದ ಸಾವು

​ಪ್ರಜಾವಾಣಿ ವಾರ್ತೆ
Published 23 ಮೇ 2021, 15:20 IST
Last Updated 23 ಮೇ 2021, 15:20 IST
ಸ್ಯಾಕ್ಸೊಫೋನ್ ಕಲಾವಿದ ಮಚ್ಚೇಂದ್ರನಾಥ್
ಸ್ಯಾಕ್ಸೊಫೋನ್ ಕಲಾವಿದ ಮಚ್ಚೇಂದ್ರನಾಥ್   

ಮಂಗಳೂರು: ಅಂತರರಾಷ್ಟ್ರೀಯ ಮಟ್ಟದ ಸ್ಯಾಕ್ಸೊಫೋನ್ ಕಲಾವಿದ ಮಚ್ಚೇಂದ್ರನಾಥ್ ಮಂಗಳಾದೇವಿ (62) ಭಾನುವಾರ ನಿಧನರಾದರು.

ಅವರಿಗೆ ಕೋವಿಡ್ ತಗುಲಿತ್ತು. ವಾರದ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ಪ್ರತಿನಿತ್ಯ ಸ್ಯಾಕ್ಸೊಫೋನ್ ಸೇವೆ ಸಲ್ಲಿಸುತ್ತಿದ್ದರು. ದುಬೈ, ಅಬುಧಾಬಿ, ಆಸ್ಟ್ರೇಲಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ ಸ್ಯಾಕ್ಸೊಫೋನ್ ಸಂಗೀತ ಕಚೇರಿಗಳನ್ನು ನಡೆಸಿದ್ದರು.

ADVERTISEMENT

ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಸಂಘಟನೆಗಳ ಪುರಸ್ಕಾರಗಳು ದೊರೆತಿದ್ದವು. ಅವರಿಗೆ ಪುತ್ರಿ, ಸ್ಯಾಕ್ಸೊಫೋನ್ ಕಲಾವಿದೆ ಸಿಂಧು ಭೈರವಿ ಹಾಗೂ ಪುತ್ರ ಇದ್ದಾರೆ. ಮಚ್ಚೇಂದ್ರನಾಥ್ ಪತ್ನಿ ಸುಶೀಲಾ ಅವರು ಅಸೌಖ್ಯದಿಂದ ವಾರದ ಹಿಂದೆ ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.