ಮಂಗಳೂರಲ್ಲಿ ಯೋಗ ದಿನಾಚರಣೆ
ಮಂಗಳೂರು: ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗಪಟುಗಳು, ವಿದ್ಯಾರ್ಥಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಸಾಮೂಹಿಕ ಯೋಗಾಭ್ಯಾಸ ಮಾಡಿದರು.
ಜಿಲ್ಲಾಡಳಿತ, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಪುರಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯೋಗಗುರು ಗೋಪಾಲಕೃಷ್ಣ ದೇಲಂಪಾಡಿ ಹಾಗೂ ಅವರ ಶಿಷ್ಯರು ಯೋಗಾಭ್ಯಾಸಕ್ಕೆ ಮಾರ್ಗದರ್ಶನ ನೀಡಿದರು.
ಪ್ರಾಣಾಯಾಮ, ಧ್ಯಾನ, ಆಸನಗಳನ್ನು ಅಭ್ಯಾಸ ಮಾಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು, ಯೋಗವು ಭಾರತೀಯರ ಬದುಕಿನ ವಿಧಾನವಾಗಿದೆ. ಯೋಗಕ್ಕೆ ಇಡೀ ಮನುಕುಲವನ್ನು ಒಗ್ಗೂಡಿಸುವ ಸಾಮರ್ಥ್ಯವಿದೆ ಎಂದರು.
ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಜಿಲ್ಲಾ ಪಂಚಾಯಿತಿ ಸಿಇಒ ಡಾ. ಆನಂದ್, ಡಿಸಿಪಿ ರವಿಶಂಕರ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಇಕ್ಬಾಲ್ ಅಹಮ್ಮದ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.