ADVERTISEMENT

ನಕ್ಸಲ್ ಚಟುವಟಿಕೆಯಲ್ಲಿ ಭಾಗಿ ಆರೋಪ: ವಿಠಲ ಮಲೆಕುಡಿಯ ನಿರ್ದೋಷಿಯೆಂದ ಕೋರ್ಟ್‌

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2021, 11:52 IST
Last Updated 21 ಅಕ್ಟೋಬರ್ 2021, 11:52 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಗಳೂರು: ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದ ವಿಠಲ ಮಲೆಕುಡಿಯ ಮತ್ತು ಅವರ ತಂದೆ ಲಿಂಗಣ್ಣ ಮಲೆಕುಡಿಯ ಪ್ರಕರಣದ ವಿಚಾರಣೆ ನಡೆಸಿದ ಇಲ್ಲಿನ ಮೂರನೇ ಹೆಚ್ಚುವರಿ ನ್ಯಾಯಾಲಯವು ಇವರಿಬ್ಬರೂ ನಿರ್ದೋಷಿ ಎಂದು ಆದೇಶ ಪ್ರಕಟಿಸಿದೆ.

ಗುರುವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಬಿ. ಜಕಾತಿ ಈ ಆದೇಶ ಪ್ರಕಟಿಸಿದರು.

ಬೆಳ್ತಂಗಡಿ ತಾಲ್ಲೂಕು ಕುತ್ಲೂರಿನ ವಿಠಲ ಮಲೆಕುಡಿಯ ಅವರನ್ನು 2012ರ ಮಾರ್ಚ್ 3ರಂದು ನಕ್ಸಲ್ ನಿಗ್ರಹ ದಳವು ಬಂಧಿಸಿತ್ತು. ಬಳಿಕ ನ್ಯಾಯಾಲಯಕ್ಕೆ ಸಲ್ಲಿಸಲಾದ ದೋಷಾರೋಪ ಪಟ್ಟಿಯಲ್ಲಿ ವಿಠಲ ಮಲೆಕುಡಿಯ ಅವರನ್ನು 6ನೇ ಆರೋಪಿಯನ್ನಾಗಿ ಹಾಗೂ ಅವರ ತಂದೆ ಲಿಂಗಣ್ಣ ಮಲೆಕುಡಿಯ ಅವರನ್ನು 7ನೇ ಆರೋಪಿಯನ್ನಾಗಿ ಮಾಡಲಾಗಿತ್ತು.

ADVERTISEMENT

ಬಂಧನ ಸಮಯದಲ್ಲಿ ವಿಠಲ ಮಲೆಕುಡಿಯ ಮಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿದ್ಯಾರ್ಥಿಯಾಗಿದ್ದರು. ಜೈಲಿನಿಂದಲೇ ಪರೀಕ್ಷೆಗೆ ಬಂದಿದ್ದು, ಪರೀಕ್ಷಾ ಕೇಂದ್ರದಲ್ಲಿ ಅವರು ಕೈಕೋಳ ತೊಟ್ಟು ಪರೀಕ್ಷೆ ಬರೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.