ADVERTISEMENT

ರಸ್ತೆ ಅಪಘಾತ: ಮುಸ್ಲಿಂ ಧರ್ಮಗುರು

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2019, 16:32 IST
Last Updated 20 ನವೆಂಬರ್ 2019, 16:32 IST

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಗರದ ಪಂಪ್‌ ಸಮೀಪದ ಉಜ್ಜೋಡಿಯಲ್ಲಿ ಬುಧವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮುಸ್ಲಿಂ ಧರ್ಮಗುರು (ಉಸ್ತಾದ್‌) ಒಬ್ಬರು ಮೃತಪಟ್ಟಿದ್ದಾರೆ.

ಪಾಣೆಮಂಗಳೂರು ಸಮೀಪದ ಮೆಲ್ಕಾರ್‌– ರೆಂಗೇಲು ನಿವಾಸಿ ಹಾಫೀಲ್‌ ಮುಹಮ್ಮದ್ ತೌಸೀಫ್‌ ಹಿಮಮಿ (35) ಮೃತರು. ಪಂಪ್‌ವೆಲ್‌ ಮಸೀದಿಯಲ್ಲಿ ತಕ್ವ ಧಾರ್ಮಿಕ ತರಬೇತಿ ನೀಡಲು ಅವರು ಕೆ.ಸಿ.ರೋಡ್‌ ಕಡೆಯಿಂದ ಸ್ಕೂಟರ್‌ನಲ್ಲಿ ಬರುತ್ತಿದ್ದರು. ಆಗ ಎದುರಿನಿಂದ ಬರುತ್ತಿದ್ದ ಬಸ್‌ ಅವರಿಗೆ ಡಿಕ್ಕಿ ಹೊಡೆದಿದೆ. ರಸ್ತೆಗೆ ಉರುಳಿದ ತೌಸೀಫ್‌ ಹಿಮಮಿ ದೇಹದ ಮೇಲೆ ಬಸ್ಸಿನ ಚಕ್ರ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

‌ಮೃತದೇಹವನ್ನು ವೆನ್ಲಾಕ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪಾಣೆಮಂಗಳೂರು ಆಲಡ್ಕ ಜುಮಾ ಮಸೀದಿಯಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ADVERTISEMENT

ಅಪಘಾತಕ್ಕೆ ಕಾರಣವಾದ ಬಸ್ ಚಾಲಕ ಸುನೀಲ್‌ಕುಮಾರ್‌, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ದೂರು ನೀಡಲಾಗಿದೆ. ಮಂಗಳೂರು ದಕ್ಷಿಣ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.