ADVERTISEMENT

ವಿದ್ಯುತ್‌ ಬಿಲ್‌ ಮನ್ನಾ ಮಾಡಿ

ಮೆಸ್ಕಾಂಗೆ ಐವನ್ ಡಿಸೋಜ ಮನವಿ

​ಪ್ರಜಾವಾಣಿ ವಾರ್ತೆ
Published 18 ಮೇ 2021, 2:42 IST
Last Updated 18 ಮೇ 2021, 2:42 IST
ಐವನ್‌ ಡಿಸೋಜ ನೇತೃತ್ವದಲ್ಲಿ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
ಐವನ್‌ ಡಿಸೋಜ ನೇತೃತ್ವದಲ್ಲಿ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.   

ಮಂಗಳೂರು: ಲಾಕ್‌ಡೌನ್‌ ಪರಿಣಾಮ ಕಾರ್ಮಿಕರು, ಸಣ್ಣ ಉದ್ದಿಮೆಗಾರರು ವಿದ್ಯುತ್‌ ಬಿಲ್‌ ಕಟ್ಟಲು ಸಾಧ್ಯವಾಗುತ್ತಿಲ್ಲ. ಬಿಲ್‌ ಪಾವತಿಸದಿದ್ದರೂ ವಿದ್ಯುತ್ ಸರಬರಾಜು ನಿಲ್ಲಿಸಬಾರದು. ಲಾಕ್‌ಡೌನ್ ಸಂದರ್ಭದಲ್ಲಿ ವಿದ್ಯುತ್ ಬಿಲ್‌ ಮನ್ನಾ ಮಾಡಬೇಕು ಎಂದು ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ನೇತೃತ್ವದ ನಿಯೋಗ ಮೆಸ್ಕಾಂ ಎಂಡಿ ಪ್ರಶಾಂತ್‌ಕುಮಾರ್ ಮಿಶ್ರಾ ಅವರಿಗೆ ಮನವಿ ಸಲ್ಲಿಸಿದೆ.

ಇತರ ರಾಜ್ಯಗಳಲ್ಲಿ ವಿದ್ಯುತ್ ಬಿಲ್‌ ಸಂಪೂರ್ಣ ಮನ್ನಾ ಮಾಡಿದ್ದು, ಕೆಲವು ರಾಜ್ಯಗಳಲ್ಲಿ 200 ಯುನಿಟ್‌ನವರೆಗೆ ವಿದ್ಯುತ್ ಬಿಲ್ ಮನ್ನಾ ಮಾಡಲಾಗಿದೆ. ಅದೇ ರೀತಿ ಇಲ್ಲಿಯೂ ವಿದ್ಯುತ್ ಬಿಲ್‌ ಮನ್ನಾ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪಾಲಿಕೆ ಸದಸ್ಯ ನವೀನ್ ಡಿಸೋಜ, ಪದಾಧಿಕಾರಿಗಳಾದ ಪ್ರಕಾಶ್ ಸಾಲಿಯಾನ್, ಭಾಸ್ಕರ್ ರಾವ್, ಚಿತ್ತರಂಜನ್ ಶೆಟ್ಟಿ, ಮಹೇಶ್ ಕೋಡಿಕಲ್, ಆಲ್‌ಸ್ಟನ್ ಡಿಕುನ್ಹಾ, ಸಲೀಂ ಮುಕ್ಕ, ಯೂಸೂಫ್ ಉಚ್ಚಿಲ್, ಆರಿಫ್ ಬಾವ, ಅಬಿಬುಲ್ಲ ಕಣ್ಣೂರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.