ADVERTISEMENT

ಮಂಗಳೂರು: ನಿವೃತ್ತ ಸರ್ಕಾರಿ ನೌಕರರ ವೇದಿಕೆ ಗೌರವಾಧ್ಯಕ್ಷರಾಗಿ ಐವನ್ ಆಯ್ಕೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2025, 12:50 IST
Last Updated 6 ಜೂನ್ 2025, 12:50 IST
ರಾಜ್ಯ ನಿವೃತ್ತ ನೌಕರರ ವೇದಿಕೆಯ ಗೌರವಾಧ್ಯಕ್ಷರಾಗಿ ಆಯ್ಕೆಯಾದ ಐವನ್ ಡಿಸೋಜ ಅವರನ್ನು ಸದಸ್ಯರು ಅಭಿನಂದಿಸಿದರು
ರಾಜ್ಯ ನಿವೃತ್ತ ನೌಕರರ ವೇದಿಕೆಯ ಗೌರವಾಧ್ಯಕ್ಷರಾಗಿ ಆಯ್ಕೆಯಾದ ಐವನ್ ಡಿಸೋಜ ಅವರನ್ನು ಸದಸ್ಯರು ಅಭಿನಂದಿಸಿದರು   

ಮಂಗಳೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ವೇದಿಕೆಯ ಗೌರವಾಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆಯ್ಕೆಯಾಗಿದ್ದಾರೆ.

ವೇದಿಕೆಯ ರಾಜ್ಯದ ಮಹಾ ಪ್ರಧಾನ ಸಂಚಾಲಕ ಡಾ.ಎಂ.ಪಿ.ಎಂ. ಷಣ್ಮುಗಯ್ಯ  ಅಧ್ಯಕ್ಷತೆಯಲ್ಲಿ ನಗರದಲ್ಲಿ ಗುರುವಾರ  ರಾಜ್ಯದ ಎಲ್ಲ ಜಿಲ್ಲೆಗಳ ಸಂಚಾಲಕರ ಸಭೆಯಲ್ಲಿ ಐವನ್ ಅವರನ್ನು ಸಂಘಟನೆಯ ಗೌರವಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ವೇದಿಕೆಯ ಪ್ರಧಾನ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ, ಪದಾಧಿಕಾರಿಗಳು ಮತ್ತು‌  ನಿವೃತ್ತ ಸರ್ಕಾರಿ ನೌಕರರು ಸಭೆಯಲ್ಲಿ ಭಾಗವಹಿಸಿದ್ದರು.  ವೇದಿಕೆಯ ಬೇಡಿಕೆಗಳನ್ನು ಸರಕಾರದ ಮುಂದಿಟ್ಟು ನ್ಯಾಯ ದೊರಕಿಸಿಕೊಡುವಂತೆ ಐವನ್ ಅವರಿಗೆ ಮನವಿಯನ್ನು ಸಲ್ಲಿಸಿದರು ಎಂದು ಸಂಘಟನೆಯ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT