ADVERTISEMENT

ಪುತ್ತೂರಿನಲ್ಲಿ `ಹಲಸು ಹಬ್ಬ' ಹಲಸು ಭವಿಷ್ಯದಲ್ಲಿ ಸೂಪರ್ ಫುಡ್ : ಶ್ರೀಪಡ್ರೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2018, 12:53 IST
Last Updated 8 ಜುಲೈ 2018, 12:53 IST
ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಭಾನುವಾರ ನವಚೇತನ ಸ್ನೇಹ ಸಂಗಮ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ, ಅಡಿಕೆ ಪತ್ರಿಕೆ ಹಾಗೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ನಡೆದ `ಹಲಸು ಹಬ್ಬ' ಕಾರ್ಯಕ್ರಮವನ್ನು ಅಡಿಕೆ ಪತ್ರಿಕೆ ಕಾರ್ಯನಿವರ್ಾಹಕ ಸಂಪಾದಕ ಶ್ರೀಪಡ್ರೆ ಅವರು ಹಲಸು ತುಂಡರಿಸುವ ಮೂಲಕ ಉದ್ಘಾಟಿಸಿದರು.
ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಭಾನುವಾರ ನವಚೇತನ ಸ್ನೇಹ ಸಂಗಮ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ, ಅಡಿಕೆ ಪತ್ರಿಕೆ ಹಾಗೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ನಡೆದ `ಹಲಸು ಹಬ್ಬ' ಕಾರ್ಯಕ್ರಮವನ್ನು ಅಡಿಕೆ ಪತ್ರಿಕೆ ಕಾರ್ಯನಿವರ್ಾಹಕ ಸಂಪಾದಕ ಶ್ರೀಪಡ್ರೆ ಅವರು ಹಲಸು ತುಂಡರಿಸುವ ಮೂಲಕ ಉದ್ಘಾಟಿಸಿದರು.   

ಪುತ್ತೂರು: ದೇಶದ ವಿವಿಧ ರಾಜ್ಯಗಳಲ್ಲಿ ಹಲಸಿನ ಮೌಲ್ಯವರ್ಧನೆಗೆ ಆದ್ಯತೆ ನೀಡಲಾಗುತ್ತಿದ್ದು, ಹಲಸಿನ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಭವಿಷ್ಯದಲ್ಲಿ ಹಲಸು ಅನಿವಾರ್ಯ ಆಹಾರ (ಸೂಪರ್ ಫುಡ್) ಆಗಲಿದ್ದು, ಹಲಸಿನ ಬಗ್ಗೆ ಇರುವ ಕೀಳರಿಮೆ ದೂರವಾಗಬೇಕು ಎಂದು ಕೃಷಿತಜ್ಞ ಶ್ರೀಪಡ್ರೆ ಅವರು ಹೇಳಿದರು.

ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಭಾನುವಾರ ನವಚೇತನ ಸ್ನೇಹ ಸಂಗಮ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ, ಅಡಿಕೆ ಪತ್ರಿಕೆ ಹಾಗೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ನಡೆದ `ಹಲಸು ಹಬ್ಬ' ಕಾರ್ಯಕ್ರಮವನ್ನು ಹಲಸು ತುಂಡರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಇಂದು ಪೇಟೆಯಿಂದ ವಿವಿಧ ಬಗೆಯ ಹಣ್ಣುಗಳನ್ನು ಖರೀದಿಸಿಕೊಂಡು ಹೋಗುವುದನ್ನು ನಾವು ಕಾಣುತ್ತಿದ್ದೇವೆ. ಅದೇ ಮಾದರಿಯಲ್ಲಿ ಹಲಸನ್ನು ಕೂಡ ಖರೀದಿಸುವ ಮನಸ್ಸು ಬೆಳೆಯಬೇಕು ಎಂದ ಅವರು ಇಂದು ಕೇರಳದಲ್ಲಿ ಹಲಸಿನ ಬಗ್ಗೆ ಸಾಕಷ್ಟು ಅಧ್ಯಯನಗಳು ನಡೆಯುತ್ತಿದ್ದು,ಅದಕ್ಕೆ ಅಲ್ಲಿ ಪ್ರೋತ್ಸಾಹ ಲಭ್ಯವಾಗುತ್ತಿದೆ. ದೇಶದ ವಿವಿಧ ರಾಜ್ಯಗಳು ಸಹಕಾರ ನೀಡುತ್ತಿವೆ. ವಿದೇಶದಲ್ಲಿ ಹಲಸನ್ನು ಸಸ್ಯಜನ್ಯ ಮಾಂಸ ಎಂದೇ ಪರಿಗಣಿಸಿ ಆಹಾರವಾಗಿ ಬಳಕೆ ಮಾಡುತ್ತಿದ್ದಾರೆ. ದೇಶದಲ್ಲೂ ಇದೇ ವಾತಾವರಣ ಸೃಷ್ಟಿಯಾಗುತ್ತಿರುವುದರಿಂದ ಹಲಸಿಗೆ ಭವಿಷ್ಯ ಇದೆ ಎಂದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್.ಸುಧಾಕರ ಶೆಟ್ಟಿ ಅವರು ಮಾತನಾಡಿ ಹಲಸು ಎಂಬುದು ನಿರ್ಲಕ್ಷ ಮಾಡುವ ವಸ್ತುವಲ್ಲ. ಅದು ಎಲ್ಲಾ ವಿಧದಿಂದಲೂ ಬಳಕೆಗೆ ಯೋಗ್ಯವಾಗಿದೆ. ಹೀಗಾಗಿ ಇಂತಹ ಕಾರ್ಯಕ್ರಮ ನಡೆಯುವ ಮೂಲಕ ಕೃಷಿಕರಿಗೂ ಗ್ರಾಹಕರಿಗೂ ಸಂಬಂಧ ಬೆಸೆಯುವ ಕೆಲಸ ಮಾಡಬೇಕಿದೆ ಎಂದರು.

ಸ್ವಣರ್ೋದ್ಯಮಿ ಕೃಷ್ಣನಾರಾಯಣ ಮುಳಿಯ ಅವರು ಮಾತನಾಡಿ, ಹಲಸಿನ ಉತ್ಪನ್ನಗಳನ್ನು ಎಲ್ಲರೂ ಬಳಕೆ ಮಾಡುವ ಜೊತೆಗೆ ಅದರ ಬಹುಪಯೋಗಗಳನ್ನು ಜನತೆಗೆ ತಿಳಿಸುವ ಕೆಲಸವಾಗಬೇಕು ಎಂದರು. ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ವಿ ಎಸ್ ಭಟ್ ಅವರು ದೀಪಪ್ರಜ್ವಲನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನವಚೇತನ ಸ್ನೇಹ ಸಂಗಮದ ಕಾರ್ಯದರ್ಶಿ ಪಾಂಡುರಂಗ ಭಟ್ , ಸದಸ್ಯ ಪ್ರಕಾಶ್ ಕುಮಾರ್ ಕೊಡೆಂಕಿರಿ ಇದ್ದರು.

ನವಚೇತನ ಸ್ನೇಹ ಸಂಗಮದ ಅಧ್ಯಕ್ಷ ಅನಂತ ಪ್ರಸಾದ್ ನೈತ್ತಡ್ಕ ಸ್ವಾಗತಿಸಿದರು. ಸದಸ್ಯ ಸುಹಾಸ ಮರಿಕೆ ವಂದಿಸಿದರು. ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.