ADVERTISEMENT

'ಆಳ್ವಾಸ್ ಪ್ರಗತಿ 2023' ಉದ್ಯೋಗ ಮೇಳ ಇಂದಿನಿಂದ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2023, 13:29 IST
Last Updated 5 ಅಕ್ಟೋಬರ್ 2023, 13:29 IST
ಮೂಡುಬಿದಿರೆಯ ಆಳ್ವಾಸ್ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳಕ್ಕೆ ತೆರೆಯಲಾದ ಮಾಹಿತಿ ಕೇಂದ್ರ
ಮೂಡುಬಿದಿರೆಯ ಆಳ್ವಾಸ್ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳಕ್ಕೆ ತೆರೆಯಲಾದ ಮಾಹಿತಿ ಕೇಂದ್ರ   

ಮೂಡುಬಿದಿರೆ: ವಿವಿಧ ವಲಯಗಳ ಕಂಪನಿಗಳ ಪಾಲ್ಗೊಳ್ಳುವಿಕೆಯೊಂದಿಗೆ ಬೃಹತ್ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ -2023’ 13ನೇ ಆವೃತ್ತಿ ಅ.6ರಿಂದ ಎರಡು ದಿನ ವಿದ್ಯಾಗಿರಿಯಲ್ಲಿ ನಡೆಯಲಿದೆ.

ಆಳ್ವಾಸ್ ಪಿಯು ಕಾಲೇಜಿನ ಆವರಣ, ಗ್ರಂಥಾಲಯ ಬ್ಲಾಕ್‌ನಲ್ಲಿ ಉದ್ಯೋಗ ಮೇಳದ ಸಂದರ್ಶನ, ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಇಂದು ಬೆಳಿಗ್ಗೆ 9.30ಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಮೇಳ ಉದ್ಘಾಟಿಸುವರು. ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸುವರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡುವರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT