ಸಾಂದರ್ಭಿಕ ಚಿತ್ರ
ಪುತ್ತೂರು: ಪತ್ರಿಕೆಯೊಂದರಲ್ಲಿ ಪ್ರಕಟಗೊಂಡಿದ್ದ ಉದ್ಯೋಗದ ಜಾಹೀರಾತನ್ನು ನಂಬಿ, ಉದ್ಯೋಗದ ಆಸೆಯಿಂದ ವಂಚಕರ ಖಾತೆಗೆ ₹ 2.25 ಲಕ್ಷ ಹಣ ಜಮೆ ಮಾಡಿ ಯುವತಿಯೊಬ್ಬರು ಮೋಸ ಹೋಗಿದ್ದಾರೆ. ಆರ್ಯಾಪು ಗ್ರಾಮದ ಒಳತ್ತಡ್ಕ ನಿವಾಸಿ ನಿಶ್ಮಿತಾ (24) ವಂಚನೆಗೊಳಗಾದ ಯುವತಿ.
ಪತ್ರಿಕೆ ಜಾಹೀರಾತಿನಲ್ಲಿ ನೀಡಲಾಗಿದ್ದ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ವಿಚಾರಿದ ಯುವತಿ, ಅವರು ಸೂಚಿಸಿದಂತೆ 2023ರಜೂನ್ 28ರಿಂದ 2024ರ ಜನವರಿ12ರ ಅವಧಿಯಲ್ಲಿ ಹಂತ ಹಂತವಾಗಿ ಅವರು ತಿಳಿಸಿದ ಬ್ಯಾಂಕ್ ಖಾತೆಗಳಿಗೆ ಒಟ್ಟು ₹2.25 ಲಕ್ಷ ಪಾವತಿ ಮಾಡಿದ್ದರು. ಆದರೆ, ಆರೋಪಿಗಳು ಉದ್ಯೋಗ ನೀಡದೆ, ಪಡೆದುಕೊಂಡ ಹಣವನ್ನೂ ಹಿಂತಿರುಗಿಸದೆ ವಂಚಿಸಿದ್ದಾರೆ. ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.