ADVERTISEMENT

ವಿಟ್ಲ: ಬಂಟ್ವಾಳ ತಾಲ್ಲೂಕು ಮಟ್ಟದ ಕಬಡ್ಡಿ ಪಂದ್ಯಾಟ 

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2018, 10:32 IST
Last Updated 27 ಅಕ್ಟೋಬರ್ 2018, 10:32 IST
ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಬಂಟ್ವಾಳ ತಾಲ್ಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ನಿವೃತ್ತ ದೈಹಿಕ ಶಿಕ್ಷಕರನ್ನು ಸನ್ಮಾನಿಸಲಾಯಿತು.
ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಬಂಟ್ವಾಳ ತಾಲ್ಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ನಿವೃತ್ತ ದೈಹಿಕ ಶಿಕ್ಷಕರನ್ನು ಸನ್ಮಾನಿಸಲಾಯಿತು.   

ವಿಟ್ಲ: ಪದವಿ ಪೂರ್ವ ಶಿಕ್ಷಣ ಇಲಾಖೆ, ವಿಟ್ಲ ವಿಠಲ ವಿದ್ಯಾ ಸಂಘ, ವಿಟ್ಲ ವಿಠಲ ಪದವಿಪೂರ್ವ ಕಾಲೇಜು ವತಿಯಿಂದ ಬಂಟ್ವಾಳ ತಾಲ್ಲೂಕು ಮಟ್ಟದ ಕಬಡ್ಡಿ ಪಂದ್ಯಾಟ ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆಯಿತು.

ವಿಟ್ಲ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಾಮ್ದಾಸ್ ಶೆಣೈ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ, ‘ಕ್ರೀಡಾಕೂಟಗಳ ಮೂಲಕ ಸಂಸ್ಥೆಗಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳು ಕ್ರೀಡಾಪೂರ್ತಿ ಮೆರೆದಾಗ ಕ್ರೀಡಾಕೂಟಗಳು ಯಶಸ್ವಿ ಆಗುತ್ತವೆ’ ಎಂದು ಹೇಳಿದರು.

ವಿಠಲ ವಿದ್ಯಾ ಸಂಘದ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್ ಅಧ್ಯಕ್ಷತೆ ವಹಿಸಿದ್ದರು.

ADVERTISEMENT

ಕಾರ್ಯಕ್ರಮದಲ್ಲಿ ವಿಠಲ ಪ್ರೌಢ ಶಾಲಾ ನಿವೃತ್ತ ದೈಹಿಕ ಶಿಕ್ಷಕಿ ಮಲ್ಲಿಕಾ ಹೆಗ್ಗಡೆ ಹಾಗೂ ಮಾಣಿ ಕರ್ನಾಟಕ ಪದವಿ ಪೂರ್ವ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಕ ಗಂಗಾಧರ್ ರೈ ಅವರನ್ನು ಸನ್ಮಾನಿಸಲಾಯಿತು. ಬಂಟ್ವಾಳ ತಾಲ್ಲೂಕಿನ ವಿವಿಧ ಕಾಲೇಜುಗಳ ಬಾಲಕರ 14 ತಂಡ ಹಾಗೂ ಬಾಲಕಿಯರ ವಿಭಾಗದಲ್ಲಿ 2 ತಂಡಗಳು ಭಾಗವಹಿಸಿವೆ.

ಪದವಿಪೂರ್ವ ಶಿಕ್ಷಣ ಇಲಾಖೆಯ ಕ್ರೀಡಾ ಸಂಯೋಜಕ ಪ್ರೇಮನಾಥ ಶೆಟ್ಟಿ, ವಿಠಲ ವಿದ್ಯಾ ಸಂಘದ ಸಂಚಾಲಕ ಎಲ್.ಎನ್ ಕೂಡೂರು, ಕೋಶಾಧಿಕಾರಿ ಎಂ ನಿತ್ಯಾನಂದ ನಾಯಕ್, ವಿಠಲ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ, ಯಶವಂತ ವಿಟ್ಲ, ಪದ್ಮಯ್ಯ ಗೌಡ ಉಪಸ್ಥಿತರಿದ್ದರು.

ಕಾಲೇಜು ಪ್ರಾಂಶುಪಾಲ ಆದರ್ಶ ಚೊಕ್ಕಾಡಿ ಸ್ವಾಗತಿಸಿದರು. ಉಪನ್ಯಾಸಕ ಅಣ್ಣಪ್ಪ ಸಾಸ್ತಾನ ನಿರೂಪಿಸಿದರು. ದೈಹಿಕ ಶಿಕ್ಷಣ ನಿದರ್ೇಶಕ ಸುಚೇತನ ಜೈನ್ ವಂದಿಸಿದರು. ಉಪನ್ಯಾಸಕರಾದ ಪ್ರಕಾಶ್ ಹಾಗೂ ವಿಶ್ವಕುಮಾರಿ ಸನ್ಮಾನ ಪತ್ರ ಓದಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.