ADVERTISEMENT

ಕಲಾಯಿ ಅಶ್ರಫ್‌ ಕೊಲೆ: ವಿಎಚ್‌ಪಿ ಮುಖಂಡ ಭರತ್‌ ಕುಮ್ಡೇಲುಗೆ ನ್ಯಾಯಾಂಗ ಬಂಧನ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2025, 11:16 IST
Last Updated 10 ಅಕ್ಟೋಬರ್ 2025, 11:16 IST
<div class="paragraphs"><p>ಭರತ್‌ ಕುಮ್ಡೇಲು</p></div>

ಭರತ್‌ ಕುಮ್ಡೇಲು

   

ಮಂಗಳೂರು: ಬಂಟ್ವಾಳ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 2017ನೇ ಸಾಲಿನಲ್ಲಿ ನಡೆದಿದ್ದ ಕಲಾಯಿ ಅಶ್ರಫ್‌ ಕೊಲೆ ಪ್ರಕರಣದ ಆರೋಪಿ, ವಿಎಚ್‌ಪಿ ಮುಖಂಡ ಭರತ್‌ ಕುಮ್ಡೇಲು ಶುಕ್ರವಾರ ನ್ಯಾಯಾಲಯಕ್ಕೆ ಹಾಜರಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

‘ಈ ಪ್ರಕರಣದಲ್ಲಿ ಈತ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಶುಕ್ರವಾರ ಇಲ್ಲಿಯ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಹಾಜಗಿದ್ದ. ನ್ಯಾಯಾಲಯ ಆತನಿಗೆ ಇದೇ 25ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

‘ಈತನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ 13, ಪುತ್ತೂರು ಮತ್ತು ಉಪ್ಪಿನಂಗಡಿ ಠಾಣೆಗಳಲ್ಲಿ ತಲಾ ಒಂದು ಪ್ರಕರಣಗಳಿವೆ’ ಎಂದು ಪೊಲೀಸರು ಮಹಿತಿ ನೀಡಿದ್ದಾರೆ.

ಕೊಳತ್ತಮಜಲು ನಿವಾಸಿ ಅಬ್ದುಲ್ ರಹಿಮಾನ್ ಅವರನ್ನು ಬಂಟ್ವಾಳ ತಾಲ್ಲೂಕಿನ ಕುರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ 27ರಂದು ಹತ್ಯೆ ಮಾಡಲಾಗಿತ್ತು. ಅವರ ಜೊತೆಗಿದ್ದ ಕಲಂದರ್ ಶಾಫಿ ಎಂಬವರ ಮೇಲೆ ಹಲ್ಲೆ ನಡೆಸಲಾಗಿತ್ತು. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿಯೂ ಭರತ್‌ ಮುಡ್ಲೇಲು ಆರೋಪಿ. ಈ ಪ್ರಕರಣದ ಎಲ್ಲ ಆರೋಪಿಗಳ ವಿರುದ್ಧ ಪೊಲೀಸರು ಇತ್ತೀಚಿಗಷ್ಟೇ 2000ರ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೋಕಾ) ಅಡಿ ಪ್ರಕರಣ ದಾಖಲಿಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.