ADVERTISEMENT

ಸಬ್ ಜೂನಿಯರ್‌ ವಿಭಾಗದ ‘ರೋಟರಿ ಕಂಬಳ ಕೂಟ’ಕ್ಕೆ ಚಾಲನೆ

ಸಿದ್ಧಕಟ್ಟೆ: ಕೊಡಂಗೆ ವೀರ-ವಿಕ್ರಮ ಜೋಡುಕರೆಯಲ್ಲಿ ಹೊಸ ಪ್ರಯೋಗ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2024, 13:08 IST
Last Updated 19 ಅಕ್ಟೋಬರ್ 2024, 13:08 IST
ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಕೊಡಂಗೆ ವೀರ -ವಿಕ್ರಮ ಜೋಡುಕರೆಯಲ್ಲಿ ಶನಿವಾರ ನಡೆದ ಸಬ್ ಜೂನಿಯರ್ ನೇಗಿಲು ಮತ್ತು ಹಗ್ಗ ವಿಭಾಗದ ‘ರೋಟರಿ ಕಂಬಳ ಕೂಟ’ಕ್ಕೆ ರೋಟರಿ ಜಿಲ್ಲಾ ಗವರ್ನರ್ ವಿಕ್ರಂ ದತ್ತ ಚಾಲನೆ ನೀಡಿದರು
ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಕೊಡಂಗೆ ವೀರ -ವಿಕ್ರಮ ಜೋಡುಕರೆಯಲ್ಲಿ ಶನಿವಾರ ನಡೆದ ಸಬ್ ಜೂನಿಯರ್ ನೇಗಿಲು ಮತ್ತು ಹಗ್ಗ ವಿಭಾಗದ ‘ರೋಟರಿ ಕಂಬಳ ಕೂಟ’ಕ್ಕೆ ರೋಟರಿ ಜಿಲ್ಲಾ ಗವರ್ನರ್ ವಿಕ್ರಂ ದತ್ತ ಚಾಲನೆ ನೀಡಿದರು   

ಬಂಟ್ವಾಳ: ಇಲ್ಲಿನ ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಸಬ್ ಜೂನಿಯರ್ ಹಗ್ಗ ಮತ್ತು ನೇಗಿಲು ವಿಭಾಗದ ‘ರೋಟರಿ ಕಂಬಳ ಕೂಟ’ ಆಯೋಜಿಸುವ ಮೂಲಕ ರೋಟರಿ ಕ್ಲಬ್ ಸಂಘಟನೆಗಳಿಗೆ ಹೊಸ ದಿಕ್ಕು ತೋರಿಸಿದೆ ಎಂದು ರೋಟರಿ ಜಿಲ್ಲಾ ಗವರ್ನರ್ ವಿಕ್ರಮ್ ದತ್ತ ಹೇಳಿದರು.

ಇಲ್ಲಿನ ಸಿದ್ಧಕಟ್ಟೆ ಕೊಡಂಗೆ ವೀರ ವಿಕ್ರಮ ಜೋಡುಕರೆಯಲ್ಲಿ ಶನಿವಾರ ಏರ್ಪಡಿಸಿದ್ದ ಕಂಬಳ ಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರೋಟರಿ ಕ್ಲಬ್ ಅಧ್ಯಕ್ಷ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕ್ಲಬ್‌ನ ಮಾಜಿ ಅಧ್ಯಕ್ಷ, ಕೊಯಿಲ ಮಾವಂತೂರು ಮಹಾಗಣಪತಿ ದೇವಳದ ಮೊಕ್ತೇಸರ ಎಂ.ಪದ್ಮರಾಜ ಬಲ್ಲಾಳ್ ಕಂಬಳ ಕರೆ ಉದ್ಘಾಟಿಸಿದರು.

ADVERTISEMENT

ಹಿರಿಯ ವೈದ್ಯ ಪ್ರಭಾಚಂದ್ರ ಜೈನ್, ರೋಟರಿ ಮಾಜಿ ಜಿಲ್ಲಾ ಗವರ್ನರ್ ಎನ್.ಪ್ರಕಾಶ ಕಾರಂತ್, ನಿಯೋಜಿತ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್, ಜಿಲ್ಲಾ ಕಾರ್ಯದರ್ಶಿ ರಿತೇಶ್ ಬಾಳಿಗಾ, ಸಹಾಯಕ ಗವರ್ನರ್ ಡಾ.ಮುರಳಿಕೃಷ್ಣ, ಸಹಾಯಕ ಗವರ್ನರ್ ಮಹಮ್ಮದ್ ವಳವೂರು, ಮೂಡುಬಿದಿರೆ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಡಾ.ಸುದೀಪ್ ಕುಮಾರ್ ಜೈನ್, ಶಿವಮೊಗ್ಗ ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಸ್ಯಾಂಕ್ಟಿಸ್ ಮಾತನಾಡಿದರು.

ಸಿದ್ಧಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಪೊಡುಂಬ ಸಂದೀಪ್ ಶೆಟ್ಟಿ, ಕಾರ್ಯದರ್ಶಿ ಶಶಿಧರ ಶೆಟ್ಟಿ ಕಲ್ಲಾಪು, ವಲಯ ಸೇನಾನಿ ಗಣೇಶ ಶೆಟ್ಟಿ ಸಿದ್ಧಕಟ್ಟೆ, ಮಾಜಿ ವಲಯ ಸೇನಾನಿ ಶೃತಿ ಅರುಣ್ ಮಾಡ್ತ, ಕ್ಲಬ್‌ ಉಪಾಧ್ಯಕ್ಷ ವಿಜಯ ಫರ್ನಾಂಡಿಸ್, ಕಾರ್ಯದರ್ಶಿ ರಾಜೇಶ ಶೆಟ್ಟಿ ಸೀತಾಳ ರಾಯಿ, ಕೋಶಾಧಿಕಾರಿ ಹೆರಾಲ್ಡ್ ಮೊಂತೆರೊ, ಹಿರಿಯ ತೀರ್ಪುಗಾರರಾದ ಎಡ್ತೂರು ರಾಜೀವ ಶೆಟ್ಟಿ, ವಿಜಯ ಕುಮಾರ್ ಕಂಗಿನಮನೆ, ವಾಮದಪದವು ವಲಯ ಬಂಟರ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ, ಸಿದ್ಧಕಟ್ಟೆ ರೋಟರಿ ಕ್ಲಬ್ ಸ್ಥಾಪಕಾಧ್ಯಕ್ಷ ಮೈಕೆಲ್ ಡಿಕೋಸ್ತ, ಸ್ಥಳದಾನಿ ಓಬಯ ಪೂಜಾರಿ, ಕೊರಗಪ್ಪ ಪೂಜಾರಿ, ಜನಾರ್ದನ ಬಂಗೇರ, ಪ್ರಮುಖರಾದ ಆಂಟನಿ ಸಿಕ್ವೇರಾ ಬಂಟ್ವಾಳ, ಹರೀಶ ಶೆಟ್ಟಿ ಬೈಪಾಸ್, ಬಾವ ಹೊಸಮನೆ ಸುಧಾಕರ ಚೌಟ, ಸೆಬಾಸ್ಟಿಯನ್‌ ಮಿನೇಜಸ್, ಆಲ್ವಿನ್ ಮಿನೇಜಸ್, ಸದಾನಂದ ಶೆಟ್ಟಿ ಪಂಜಿಕಲ್ಲು, ಹರಿಪ್ರಸಾದ್ ಶೆಟ್ಟಿ ಕುರುಡಾಡಿ, ರಾಜೇಶ ಶೆಟ್ಟಿ ಕೊನೆರೊಟ್ಟು, ಉದ್ಯಮಿ ಕಿರಣ್ ಕುಮಾರ್ ಮಂಜಿಲ ಭಾಗವಹಿಸಿದ್ದರು.

ಕ್ಲಬ್ ಅಧ್ಯಕ್ಷ ಸುರೇಶ ಶೆಟ್ಟಿ ಸಿದ್ಧಕಟ್ಟೆ ಸ್ವಾಗತಿಸಿ, ಸ್ಥಾಪಕಾಧ್ಯಕ್ಷ ಅವಿಲ್ ಮಿನೇಜಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ಸಹಾಯಕ ಗವರ್ನರ್ ರಾಘವೇಂದ್ರ ಭಟ್ ವಂದಿಸಿದರು.

ಕ್ಲಬ್‌ ಸದಸ್ಯ ನೆಲ್ಸನ್ ಮೋನಿಸ್, ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ ಕಾರ್ಯಕ್ರಮ ನಿರೂಪಿಸಿದರು.

ಸಬ್ ಜೂನಿಯರ್ ನೇಗಿಲು ವಿಭಾಗದಲ್ಲಿ 79 ಜತೆ ಮತ್ತು ಹಗ್ಗ ವಿಭಾಗದಲ್ಲಿ 6 ಜತೆ ಮರಿ ಕೋಣಗಳು ಪಾಲ್ಗೊಂಡಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.