ADVERTISEMENT

ಕಂಬಳದಲ್ಲಿ ಗೆದ್ದ ಚಿನ್ನದ ಬಹುಮಾನದಲ್ಲಿ ಅರ್ಧಭಾಗ ದೇವರಿಗೆ ಸಮರ್ಪಣೆ

ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಕೋಣಗಳ ಯಜಮಾನನಿಂದ 1 ಪವನ್ ಚಿನ್ನ ದೇವಸ್ಥಾನಕ್ಕೆ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2025, 13:47 IST
Last Updated 3 ಮಾರ್ಚ್ 2025, 13:47 IST
ಕೋಟಿ-ಚೆನ್ನಯ ಜೋಡುಕರೆ ಕಂಬಳದ ನೇಗಿಲು ಹಿರಿಯ ವಿಭಾಗದಲ್ಲಿ ಬೆಳ್ಳಿಪ್ಪಾಡಿ ಕೈಪ ಕೇಶವ ಮಾಂಕು ಭಂಡಾರಿ ಅವರ ಕೋಣಗಳು ಗಳಿಸಿದ 2 ಪವನ್ ಚಿನ್ನದ ಪೈಕಿ 1 ಪವನ್ ಚಿನ್ನವನ್ನು ಸೋಮವಾರ ಪುತ್ತೂರಿನ ಮಹಾಲಿಂಗೇಶ್ವರ ದೇವರಿಗೆ ಸಮರ್ಪಿಸಲಾಯಿತು
ಕೋಟಿ-ಚೆನ್ನಯ ಜೋಡುಕರೆ ಕಂಬಳದ ನೇಗಿಲು ಹಿರಿಯ ವಿಭಾಗದಲ್ಲಿ ಬೆಳ್ಳಿಪ್ಪಾಡಿ ಕೈಪ ಕೇಶವ ಮಾಂಕು ಭಂಡಾರಿ ಅವರ ಕೋಣಗಳು ಗಳಿಸಿದ 2 ಪವನ್ ಚಿನ್ನದ ಪೈಕಿ 1 ಪವನ್ ಚಿನ್ನವನ್ನು ಸೋಮವಾರ ಪುತ್ತೂರಿನ ಮಹಾಲಿಂಗೇಶ್ವರ ದೇವರಿಗೆ ಸಮರ್ಪಿಸಲಾಯಿತು   

ಪುತ್ತೂರು: ಇಲ್ಲಿ ನಡೆದ ಕೋಟಿ-ಚೆನ್ನಯ ಜೋಡುಕರೆ ಕಂಬಳದ ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ ಬಹುಮಾನವಾಗಿ 2 ‍ಪವನ್‌ ಗೆದ್ದ ಬೆಳ್ಳಿಪ್ಪಾಡಿ ಕೈಪ ಕೇಶವ ಮಾಂಕು ಭಂಡಾರಿ ಅವರು, 1 ಪವನ್ ಚಿನ್ನವನ್ನು ಸೋಮವಾರ ಪುತ್ತೂರಿನ ಮಹಾಲಿಂಗೇಶ್ವರ ದೇವರಿಗೆ ಸಮರ್ಪಿಸಿದರು.

ಅವರು ಚಿನ್ನ ಹಾಗೂ ದೇವಳದಲ್ಲಿ ನಡೆಯುವ ಅನ್ನದಾನ ಸೇವೆಗಾಗಿ ₹ 5ಸಾವಿರ ದೇಣಿಗೆ ನೀಡಿದರು. 

ದೇವಳದ ಪ್ರಧಾನ ಅರ್ಚಕ ವಸಂತ ಕೆದಿಲಾಯ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ಈಶ್ವರ ಬೇಡೆಕರ್, ಮಹಾಬಲ ರೈ ವಳತ್ತಡ್ಕ, ವಿನಯ ಸುವರ್ಣ ಭಾಗವಹಿಸಿದ್ದರು

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.