ADVERTISEMENT

ಬಂಟ್ವಾಳ: ಕನ್ನಡ ರಾಜ್ಯೋತ್ಸವ, ಆಕರ್ಷಕ ಪಥಸಂಚಲನ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2022, 7:12 IST
Last Updated 2 ನವೆಂಬರ್ 2022, 7:12 IST
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಆಕರ್ಷಕ ಪಥಸಂಚಲನ ನಡೆಸಿದರು. ಶಾಸಕ ರಾಜೇಶ ನಾಯ್ಕ್, ತಹಶೀಲ್ದಾರ್ ಡಾ.ಸ್ಮಿತಾ ರಾಮು ಇದ್ದಾರೆ.
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಆಕರ್ಷಕ ಪಥಸಂಚಲನ ನಡೆಸಿದರು. ಶಾಸಕ ರಾಜೇಶ ನಾಯ್ಕ್, ತಹಶೀಲ್ದಾರ್ ಡಾ.ಸ್ಮಿತಾ ರಾಮು ಇದ್ದಾರೆ.   

ಬಂಟ್ವಾಳ: ಜನರ ಮೇಲೆ ಒತ್ತಡದಿಂದ ಯಾವುದೇ ಭಾಷೆ ಉಳಿಸಲು ಸಾಧ್ಯವಿಲ್ಲ. ನಾಡು ನುಡಿ ಮತ್ತು ಭಾಷೆ ಬಗ್ಗೆ ಜನತೆಗೆ ಪ್ರೀತಿ ಇದ್ದಾಗ ಮಾತ್ರ ಭಾಷೆ ಬೆಳವಣಿಗೆ ಮತ್ತು ವಿಕಾಸಗೊಳ್ಳುತ್ತದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹೇಳಿದರು.

ಇಲ್ಲಿನ ಬಿ.ಸಿ.ರೋಡು ಆಡಳಿತ ಸೌಧದಲ್ಲಿ ಮಂಗಳವಾರ ನಡೆದ ರಾಜ್ಯೋತ್ಸವದಲ್ಲಿ ಅವರು ಮಾತನಾಡಿದರು.
ತಹಶೀಲ್ದಾರ್ ಡಾ. ಸ್ಮಿತಾ ರಾಮು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ರಮೇಶ್ ಮೆಲ್ಕಾರ್ ಉಪನ್ಯಾಸ ನೀಡಿದರು. ಬೂಡ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಾಟ್, ತಾಲ್ಲೂಕು ಪಂಚಾಯಿತಿ ಇಒ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಕಲಾವಿದ ಮಂಜು ವಿಟ್ಲ ಇದ್ದರು.ಪೊಲೀಸರು ಮತ್ತು ವಿದ್ಯಾರ್ಥಿಗಳಿಮದ ಆಕರ್ಷಕ ಪಥಸಂಚಲನ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT