ADVERTISEMENT

ರಾಜ್ಯ ಭಾಷೆಯಾಗಿ ತುಳು: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಠರಾವು

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2021, 22:01 IST
Last Updated 14 ಫೆಬ್ರುವರಿ 2021, 22:01 IST

ಮಂಗಳೂರು: ಪಂಚದ್ರಾವಿಡ ಭಾಷೆಗಳಲ್ಲಿ ಒಂದಾದ ತುಳುವನ್ನು ಕರ್ನಾಟಕ ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ 24ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರ ಠರಾವು ಮಂಡಿಸಲಾಯಿತು.

ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ ಕುಮಾರ್ ಕಲ್ಕೂರ, ‘ಕರ್ನಾಟಕದ ಪ್ರಾತಿನಿಧಿನಿಕ ಕಲೆಯಾದ ಯಕ್ಷಗಾನವನ್ನು ಕರ್ನಾಟಕ ರಾಜ್ಯದ ಕಲೆಯಾಗಿ ಸರ್ಕಾರ ಘೋಷಿಸುವುದೂ’ ಸೇರಿದಂತೆ ಆರು ಠರಾವುಗಳನ್ನು ಮಂಡಿಸಿದರು. ಚಪ್ಪಾಳೆ ಮೂಲಕ ಸಭಿಕರು ಬೆಂಬಲಿಸಿದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.