
ಮಂಗಳೂರು: ಕಾಂತಾವರ ಕನ್ನಡ ಸಂಘದ ವಾರ್ಷಿಕ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು ಮೊಗಸಾಲೆ ಪ್ರತಿಷ್ಠಾನ ನೀಡುವ ಸಾಹಿತ್ಯ ಪ್ರಶಸ್ತಿಗೆ ಕಾಸರಗೋಡಿನ ಕವಿ ರಾಧಾಕೃಷ್ಣ ಉಳಿಯತ್ತಡ್ಕ ಅವರನ್ನು ಆಯ್ಕೆ ಮಾಡಲಾಗಿದೆ.
ಮಂಗಳೂರಿನ ರಂಗಕರ್ಮಿ ಶಶಿರಾಜ ಕಾವೂರು ಅವರನ್ನು ಶ್ರೀಪತಿ ಮಂಜನಬೈಲು ದತ್ತಿನಿಧಿಯ ‘ರಂಗ ಸನ್ಮಾನ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಸರೋಜಿನಿ ನಾಗಪ್ಪಯ್ಯ ಈಶ್ವರಮಂಗಲ ದತ್ತಿನಿಧಿಯ ‘ಯಕ್ಷಗಾನ ಸಾಹಿತ್ಯ ಸಂಶೋಧನ ಪ್ರಶಸ್ತಿ’ಗೆ ಶಿರಸಿಯ ಸಾಹಿತಿ ಅಶೋಕ ಹಾಸ್ಯಗಾರ ಆಯ್ಕೆಯಾಗಿದ್ದಾರೆ.
ಸಂಘದ ವಾರ್ಷಿಕ ಗೌರವ ಪ್ರಶಸ್ತಿಗೆ ಹುಲಿಮನೆ ಜಯರಾಮ ಹೆಗಡೆ ಮಿಜಾರು ಭಾಜನರಾಗಿದ್ದಾರೆ.
ದತ್ತಿ ಪ್ರಶಸ್ತಿಗಳು ತಲಾ ₹ 10 ಸಾವಿರ ನಗದು, ವಾರ್ಷಿಕ ಪ್ರಶಸ್ತಿ ₹ 5 ಸಾವಿರ ನಗದು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಡಿ.28ರಂದು ಕಾಂತಾವರ ಕನ್ನಡ ಭವನದಲ್ಲಿ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ನಾ ಮೊಗಸಾಲೆ ಮತ್ತು ಪ್ರಧಾನ ಕಾರ್ಯದರ್ಶಿ ಸದಾನಂದ ನಾರಾವಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.