ADVERTISEMENT

ಕಾಂತಾವರ ಕನ್ನಡ ಸಂಘದ ದತ್ತಿನಿಧಿ ಪ್ರಶಸ್ತಿ ಘೋಷಣೆ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2024, 7:56 IST
Last Updated 20 ಅಕ್ಟೋಬರ್ 2024, 7:56 IST
ವಿಠಲ ಬೇಲಾಡಿ
ವಿಠಲ ಬೇಲಾಡಿ   

ಮೂಡುಬಿದಿರೆ (ದಕ್ಷಿಣ ಕನ್ನಡ): ಕಾಂತಾವರ ಕನ್ನಡ ಸಂಘವು 2024ರ ಸಾಲಿನ ಮೂರು ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಿದ್ದು, ಬಾಲಕೃಷ್ಣ ಆಚಾರ್ ಮತ್ತು ಅವರ ಪತ್ನಿ ವಾಣಿ ಬಿ.ಆಚಾರ್ ಅವರು ಕನ್ನಡ ಸಂಘದಲ್ಲಿ ಸ್ಥಾಪಿಸಿದ ದತ್ತಿನಿಧಿಯ ‘ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ’ಗೆ ಕಾಂತಾವರದ ನಿವೃತ್ತ ಶಿಕ್ಷಕ ವಿಠಲ ಬೇಲಾಡಿ ಆಯ್ಕೆಯಾಗಿದ್ದಾರೆ.

ಮೊಗಸಾಲೆ ಕುಟುಂಬದವರು ಸ್ಥಾಪಿಸಿದ ದತ್ತಿನಿಧಿಯ ‘ಕಾಂತಾವರ ಸಾಹಿತ್ಯ ಪ್ರಶಸ್ತಿ’ಯನ್ನು ಸುಳ್ಯ ತಾಲ್ಲೂಕಿನ ಅಜ್ಜಾವರದ ನಿವೃತ್ತ ಪ್ರಾಧ್ಯಾಪಕ, ಸಾಹಿತಿ ಪ್ರಭಾಕರ ಶಿಶಿಲ ಹಾಗೂ ಅಧ್ಯಾಪಕಿ ಸರೋಜಿನಿ ನಾಗಪ್ಪಯ್ಯ ಈಶ್ವರಮಂಗಲ ಅವರು ಸ್ಥಾಪಿಸಿದ ದತ್ತಿನಿಧಿಯ ‘ಕಾಂತಾವರ ಅನುವಾದ ಸಾಹಿತ್ಯ ಪ್ರಶಸ್ತಿ’ಗೆ ಕುಂದಾಪುರದ ನಿವೃತ್ತ ಪ್ರಾಧ್ಯಾಪಕಿ, ಸಾಹಿತಿ ಪಾರ್ವತಿ ಜಿ.ಐತಾಳ್ ಅವರು ಆಯ್ಕೆಯಾಗಿದ್ದಾರೆ.

ಕನ್ನಡ ಸಂಘದ ಸ್ಥಾಪಕ ಅಧ್ಯಕ್ಷ ಡಾ.ನಾ.ಮೊಗಸಾಲೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು.

ADVERTISEMENT

ಪ್ರಶಸ್ತಿಯು ತಲಾ ₹ 10ಸಾವಿರ ಗೌರವ ಸಂಭಾವನೆ, ತಾಮ್ರಪತ್ರ ಮತ್ತು ಸನ್ಮಾನ ಒಳಗೊಂಡಿದ್ದು, ನ.1ರಂದು ನಡೆಯುವ ‘ಕಾಂತಾವರ ಉತ್ಸವ’ದಲ್ಲಿ ಹರಿಕೃಷ್ಣ ಪುನರೂರು ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸದಾನಂದ ನಾರಾವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.