ADVERTISEMENT

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ 20ನೇ ದಿನದ ಗುರುಪಾದುಕಾ ಪೂಜೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2022, 14:25 IST
Last Updated 1 ಆಗಸ್ಟ್ 2022, 14:25 IST
ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತುರ್ಮಾಸ್ಯ 20ನೇ ದಿನದ ಗುರುಪಾದುಕಾ ಪೂಜೆಯನ್ನು ಮಾಜಿ ಶಾಸಕ ರುಕ್ಮಯ ಪೂಜಾರಿ ವಿಟ್ಲ ದಂಪತಿ ನೆರವೇರಿಸಿದರು.
ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತುರ್ಮಾಸ್ಯ 20ನೇ ದಿನದ ಗುರುಪಾದುಕಾ ಪೂಜೆಯನ್ನು ಮಾಜಿ ಶಾಸಕ ರುಕ್ಮಯ ಪೂಜಾರಿ ವಿಟ್ಲ ದಂಪತಿ ನೆರವೇರಿಸಿದರು.   

ಧರ್ಮಸ್ಥಳ: ಕನ್ಯಾಡಿ ಶ್ರೀರಾಮಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತುರ್ಮಾಸ್ಯ 20ನೇ ದಿನದ ಗುರುಪಾದುಕಾ ಪೂಜೆ ಸೋಮವಾರ ನೆರವೇರಿತು.

ಪಾದುಕಾ ಪೂಜೆಯನ್ನು ಮಾಜಿ ಶಾಸಕ ರುಕ್ಮಯ ಪೂಜಾರಿ ವಿಟ್ಲ ದಂಪತಿ ನೆರವೇರಿಸಿದರು. ಬಿಜೆಪಿ ಮುಖಂಡ ಜಗದೀಶ ಅಧಿಕಾರಿ ಮೂಡುಬಿದಿರೆ, ಜಯಕೃಷ್ಣ ಶೆಟ್ಟಿ, ಉದ್ಯಮಿಗಳಾದ ಯತೀನ್ ಕುಮಾರ್, ಚಿತ್ತರಂಜನ್ ಕಲ್ಲಡ್ಕ, ಭಾರತ್ ಬ್ಯಾಂಕ್ ನಿರ್ದೇಶಕ ಎಲ್.ವಿ.ಅಮೀನ್, ಕಾಪು ಪುರಸಭೆ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಕಾಪು ಬಿಲ್ಲವರ ಸಹಾಯಕ ಸಂಘ ಅಧ್ಯಕ್ಷ ವಿಕ್ರಂ ಕಾಪು, ಗೌರವಾಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯರಾದ ಶಶಿಧರ ಸುವರ್ಣ, ದೇವರಾಜ ಕೋಟ್ಯಾನ್, ಕಳಿಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಭಾಷಿಣಿ ಗೌಡ, ಸದಸ್ಯ ವಿಜಯ ಗೌಡ, ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜನಾರ್ದನ ಗೌಡ, ನಾಳ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭುವನೇಶ್ ಗೇರುಕಟ್ಟೆ, ಸದಸ್ಯ ಉಮೇಶ್ ಕೇಲ್ದಡ್ಕ, ನಾಳ ಭಜನಾ ಮಂಡಳಿ ಅಧ್ಯಕ್ಷ ಉಮೇಶ್ ಶೆಟ್ಟಿ ಸಂಬೋಳ್ಯ, ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಶೇಖರ ನಾಯ್ಕ್, ಬಂಗಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್, ಪ್ರಮುಖರಾದ ಗಣೇಶ್ ಗೌಡ ನಾವೂರು, ಪ್ರಶಾಂತ್ ಪಾರೆಂಕಿ, ತುಕರಾಮ್ ಸಾಲಿಯಾನ್, ಕೃಷ್ಣಪ್ಪ ಗುಡಿಗಾರ್, ಕೃಷ್ಣಪ್ಪ ಕಲ್ಲಡ್ಕ, ರಾಜಕೇಸರಿ ಸಂಘಟನೆ ಅಧ್ಯಕ್ಷ ನಾಗೇಶ್ ಇದ್ದರು.

ರವಿ ಭಟ್ ಪಜಿರಡ್ಕ ಅವರ ನೇತೃತ್ವದಲ್ಲಿ ಮೃತ್ಯುಂಜಯ ಹೋಮ ಜರಗಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.