ADVERTISEMENT

ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಶೀಘ್ರ ಮಂಡಳಿ ಮಾನ್ಯತೆ: ಸಚಿವ ಸುಧಾಕರ್

​ಪ್ರಜಾವಾಣಿ ವಾರ್ತೆ
Published 1 ಜುಲೈ 2023, 14:44 IST
Last Updated 1 ಜುಲೈ 2023, 14:44 IST
ಡಿ. ಸುಧಾಕರ್
ಡಿ. ಸುಧಾಕರ್   

ಮಂಗಳೂರು: ಪ್ರಸ್ತುತ ಅಸ್ತಿತ್ವದಲ್ಲಿರುವ ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಕಾರ್ಯಯೋಜನೆ ಕೈಗೆತ್ತಿಕೊಳ್ಳಲು ನಿರ್ದಿಷ್ಟ ಮಾರ್ಗಸೂಚಿ ಇಲ್ಲವಾಗಿದ್ದು, ಇದನ್ನು ಮಂಡಳಿಯಾಗಿ ಉನ್ನತೀಕರಿಸುವ ಸಂಬಂಧ ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ವಿಷಯ ಮಂಡಿಸಲಾಗುವುದು ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ತಿಳಿಸಿದರು.

ಶನಿವಾರ ಇಲ್ಲಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸರ್ಕಾರಿ ಆದೇಶದ ಮೇಲೆ ರಚನೆಯಾಗಿರುವ ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಮಂಡಳಿಯಾಗಿ ರೂಪಿಸಿದರೆ, ಅದಕ್ಕೆ ಕಾನೂನಾತ್ಮಕ ಬಲ ಬರುತ್ತದೆ’ ಎಂದರು.

ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ತರಲು ಪ್ರಯತ್ನಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.