ಮೂಲ್ಕಿ (ದಕ್ಷಿಣ ಕನ್ನಡ): ‘ಸದನದಲ್ಲಿ ಪ್ರತಿಭಟನೆ ನಡೆದಾಗ ನಾನೇನೂ ತಪ್ಪು ಮಾಡಿಲ್ಲ. ವಿನಾಕಾರಣ ನನ್ನ ಹೆಸರನ್ನು ಸೇರಿಸಿದ್ದಾರೆ’ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಘಟನೆಯ ನಂತರ ಸ್ಪೀಕರ್ ಯು.ಟಿ. ಖಾದರ್ ಅವರು ನಮ್ಮಲ್ಲಿ ಮಾತುಕತೆ ನಡೆಸಿದ್ದು, ತಪ್ಪು ಒಪ್ಪಿಕೊಂಡರೆ ಆರು ತಿಂಗಳ ನಿಷೇಧವನ್ನು ಕಡಿಮೆ ಮಾಡಬಹುದು ಎಂದಿದ್ದಾರೆ. ಆದರೆ, ನಾನು ತಪ್ಪೇ ಮಾಡದಿರುವಾಗ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಬೇರೆಯವರು ತಪ್ಪು ಒಪ್ಪಿಕೊಳ್ಳಲಿ; ಬಿಡಲಿ ನನಗೆ ಸಂಬಂಧಿಸಿದ್ದಲ್ಲ. ಈ ಹಿಂದೆ ಬಿಜೆಪಿ ನೇತೃತ್ವದ ಸರ್ಕಾರ ಇದ್ದಾಗ ಅಂದಿನ ಸ್ಪೀಕರ್‌ಗೆ ಅವಮಾನ ಮಾಡಿದವರು ಇಂದು ದರ್ಪ ಹಾಗೂ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.