ಮಂಗಳೂರು: ಕರ್ಣಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ (ಎಂ.ಡಿ ಮತ್ತು ಸಿಇಒ) ರಾಘವೇಂದ್ರ ಎಸ್. ಭಟ್ ನೇಮಕಗೊಂಡಿದ್ದಾರೆ.
ಜುಲೈ 16ರಿಂದ ಮುಂದಿನ ಮೂರು ತಿಂಗಳ ಅವಧಿಗೆ ಅವರನ್ನು ನೇಮಿಸಲಾಗಿದೆ. ಬ್ಯಾಂಕ್‌ನ ಮುಂದಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅಥವಾ ಸೆಬಿ ನಿಯಮ 2015ರ ಪ್ರಕಾರ ಅಧಿಕಾರ ವಹಿಸಿಕೊಂಡ ಮೂರು ತಿಂಗಳ ಒಳಗೆ ಈ ನೇಮಕಕ್ಕೆ ಷೇರುದಾರರ ಅನುಮೋದನೆ ಪಡೆಯಬೇಕಾಗುತ್ತದೆ.
ರಾಘವೇಂದ್ರ ಭಟ್ ಅವರು ಕರ್ಣಾಟಕ ಬ್ಯಾಂಕ್‌ನಲ್ಲಿ ಚೀಫ್ ಆಪರೇಟಿಂಗ್ ಆಫೀಸರ್ ಸೇರಿದಂತೆ ಪ್ರಮುಖ ಹುದ್ದೆಗಳಲ್ಲಿ ನಾಲ್ಕು ದಶಕ ಸೇವೆ ಸಲ್ಲಿಸಿದ್ದಾರೆ ಎಂದು ಬ್ಯಾಂಕ್ ಪ್ರಕಟಣೆ ತಿಳಿಸಿದೆ.
‘ರಾಘವೇಂದ್ರ ಭಟ್ ಅವರ ಅನುಭವ ಮತ್ತು ಪರಿಣತಿಯು ಬ್ಯಾಂಕ್‌ನ ನಿರಂತರ ಬೆಳವಣಿಗೆಗೆ ಸಹಕಾರಿಯಾಗಲಿದೆ’ ಎಂದು ಅಧ್ಯಕ್ಷ ಪಿ. ಪ್ರದೀಪ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
‘ನಂಬಿಕೆ ಮತ್ತು ಸದ್ಭಾವನೆ ಬ್ಯಾಂಕ್‌ನ ತಳಹದಿಯಾಗಿದ್ದು, ಶತಮಾನ ಪೂರೈಸಿರುವ ಬ್ಯಾಂಕ್‌ನ ಅಡಿಪಾಯ ಇನ್ನಷ್ಟು ಗಟ್ಟಿಗೊಳಿಸಲು ಶ್ರಮಿಸುತ್ತೇನೆ’ ಎಂದು ರಾಘವೇಂದ್ರ ಭಟ್ ಹೇಳಿದ್ದಾರೆ.
ಕರ್ಣಾಟಕ ಬ್ಯಾಂಕ್ ಎಂ.ಡಿ ಮತ್ತು ಸಿಇಒ ಆಗಿದ್ದ ಶ್ರೀಕೃಷ್ಣನ್ ಹರಿಹರ ಶರ್ಮ ರಾಜೀನಾಮೆಯಿಂದ ಈ ಸ್ಥಾನ ತೆರವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.