ADVERTISEMENT

ಮಂಗಳೂರು: ತಡೆಬೇಲಿ ಹಾಗೂ ಹೂದೋಟ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 8:24 IST
Last Updated 18 ಫೆಬ್ರುವರಿ 2021, 8:24 IST

ಮಂಗಳೂರು: ನಗರದ ಪಂಪ್ ವೆಲ್ ವೃತ್ತದಿಂದ ಕೆಪಿಟಿ ತನಕದ 3.1 ಕಿ.ಮೀ. ರಾಷ್ಟ್ರೀಯ ಹೆದ್ದಾರಿಯ ವಿಭಜಕಕ್ಕೆ ₹1.25 ಕೋಟಿ ವೆಚ್ಚದಲ್ಲಿ ತಡೆಬೇಲಿ ಹಾಗೂ ಹೂದೋಟವನ್ನು ಕರ್ಣಾಟಕ ಬ್ಯಾಂಕ್ ತನ್ನ ಸಿಎಸ್ಆರ್ (ಕಂಪನಿ ಸಾಮಾಜಿಕ ಜವಾಬ್ದಾರಿ) ಮೂಲಕ ಕೊಡುಗೆ ನೀಡಿದ್ದು, ಗುರುವಾರ ಉದ್ಘಾಟಿಸಲಾಯಿತು.

ಬ್ಯಾಂಕ್ ಅಧ್ಯಕ್ಷ ಜಯರಾಮ್ ಭಟ್ ಮಾತನಾಡಿ, ಸಮಾಜದಿಂದ ಪಡೆದ ಲಾಭದಲ್ಲಿ ಸಮಾಜಕ್ಕೆ ಕೊಡುಗೆ ನೀಡುವುದು ನಮ್ಮ ಕರ್ತವ್ಯ ಹಾಗೂ ಜವಾಬ್ದಾರಿ. ಈ ನಿಟ್ಟಿನಲ್ಲಿ ಬ್ಯಾಂಕ್ ಹಲವಾರು ಕಾರ್ಯಗಳನ್ನು ಮಾಡುತ್ತಾ ಬಂದಿದೆ ಎಂದರು.

ಶಾಸಕ ವೇದವ್ಯಾಸ ಕಾಮತ್, ಬ್ಯಾಂಕ್ ಸಿಇಒ ಮಹಾಬಲೇಶ್ವರ ರಾವ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್, ದಕ್ಷಿಣ ಕನ್ನಡ ಎಸ್ಸಿ ಲಕ್ಷ್ಮೀ ಪ್ರಸಾದ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿಶುಮೋಹನ್, ಡಿಸಿಪಿ ವಿನಯ್ ಗಾಂವ್ಕರ್, ಎಸಿಪಿ ನಟರಾಜ್, ಇನ್ ಸ್ಪೆಕ್ಟರ್ ಗೋಪಾಲಕೃಷ್ಣ ಭಟ್, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.