ಸಾಂದರ್ಭಿಕ ಚಿತ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿರುಸಿನ ಮಳೆಯಾಗುತ್ತಿದ್ದು, ಬೆಳ್ತಂಗಡಿ ತಾಲ್ಲೂಕಿನ ಪಟ್ರಮೆಯಲ್ಲಿ 25.2 ಸೆಂ.ಮೀ ಮಳೆ ದಾಖಲಾಗಿದೆ.
ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ತಾಸುಗಳಲ್ಲಿ ಬೆಳ್ತಂಗಡಿ ತಾಲ್ಲೂಕಿನ ವಿವಿಧೆಡೆಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ.
ಪಟ್ರಮೆಯಲ್ಲಿ 25.2 ಸೆಂ.ಮೀ, ಬಳಂಜದಲ್ಲಿ 21.2 ಸೆಂ.ಮೀ, ಶಿರ್ತಾಡಿಯಲ್ಲಿ 20.6 ಸೆಂ.ಮೀ, ಅಂಡಿಂಜೆಯಲ್ಲಿ 20.1, ಲಾಯಿಲದಲ್ಲಿ 18.2 ಸೆಂ.ಮೀ ಮಳೆ ದಾಖಲಾಗಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ರೆಂಜಾಳದಲ್ಲಿ 27.7 ಸೆಂ.ಮೀ, ನೀರೆಯಲ್ಲಿ 27 ಸೆಂ.ಮೀ ಮಳೆ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.