ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ: ಶಿರ್ತಾಡಿಯಲ್ಲಿ 18 ಸೆಂ.ಮೀ‌ ದಾಖಲು

​ಪ್ರಜಾವಾಣಿ ವಾರ್ತೆ
Published 24 ಮೇ 2025, 5:11 IST
Last Updated 24 ಮೇ 2025, 5:11 IST
<div class="paragraphs"><p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ</p></div>

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ

   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಎಡೆಬಿಡದೆ ಮಳೆ ಸುರಿಯುತ್ತಿದೆ.

ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ತಾಸುಗಳಲ್ಲಿ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಶಿರ್ತಾಡಿಯಲ್ಲಿ ಗರಿಷ್ಠ 18 ಸೆಂ.ಮೀ ಮಳೆ ದಾಖಲಾಗಿದೆ.‌

ADVERTISEMENT

ಬೆಳ್ತಂಗಡಿ ತಾಲ್ಲೂಕಿನ ‌ಮಲವಂತಿಗೆಯಲ್ಲಿ 17.2 ಸೆಂ.ಮೀ, ಮರೋಡಿಯಲ್ಲಿ 15.4 ಸೆಂ.ಮೀ, ಲಾಯಿಲದಲ್ಲಿ 11.6 ಸೆಂ.ಮೀ, ಮಂಗಳೂರಿನ ಬಾಳದಲ್ಲಿ 13 ಸೆಂ.ಮೀ, ಎಕ್ಕೂರಿನಲ್ಲಿ 12.7 ಸೆಂ.ಮೀ, ಕುಕ್ಕಿಪಾಡಿಯಲ್ಲಿ 12.2 ಸೆಂ.ಮೀ, ಬಂಟ್ವಾಳ ತಾಲ್ಲೂಕಿನ ರಾಯಿಯಲ್ಲಿ 10.7 ಸೆಂ.ಮೀ, ಕಾವಳಪದವಿನಲ್ಲಿ 10.6 ಸೆಂ.ಮೀ, ಕಾವಳಮೂಡೂರಿನಲ್ಲಿ 10.4 ಸೆಂ.ಮೀ, ಸರಪಾಡಿಯಲ್ಲಿ 10 ಸೆಂ.ಮೀ ಮಳೆ‌ ದಾಖಲಾಗಿದೆ.‌

ಭಾರತೀಯ ಹವಾಮಾನ ಇಲಾಖೆಯು ಕರಾವಳಿಯಲ್ಲಿ ಶನಿವಾರದಿಂದ ಮೇ 28ರವರೆಗೆ ರೆಡ್ ಅಲರ್ಟ್ ಘೋಷಿಸಿದೆ.‌

ಗಂಟೆಗೆ 40ರಿಂದ 50ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಸೂಚನೆ ನೀಡಿದೆ.‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.