ಮಂಗಳೂರು: ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆಯಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ.
ಬುಧವಾರ ಸಂಜೆಯಿಂದ ಆಗಾಗ ಬಿಡುವು ಕೊಟ್ಟು ಮಳೆ ಸುರಿಯುತ್ತಿತ್ತು. ಗುರುವಾರ ಬೆಳಿಗ್ಗೆ ಯಿಂದ ನಿರಂತರವಾಗಿ ಮಳೆಯಾಗುತ್ತಿದೆ.
ಗುರುವಾರ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಗುರುವಾರ ಶಾಲೆ- ಕಾಲೇಜುಗಳಿಗೆ ರಜೆ ನೀಡಲಾಗಿದೆ.
ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದು, ತಗ್ಗು ಪ್ರದೇಶದ ಜನರು ಜಾಗೃತರಾಗಿರುವಂತೆ ಬಂಟ್ವಾಳ ತಾಲ್ಲೂಕು ಆಡಳಿತ ಸೂಚನೆ ನೀಡಿದೆ.
ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.