ಮಂಗಳೂರು: ನಿಷೇಧಿತ ಮಾದಕ ವಸ್ತುಗಳನ್ನು ಬೆಂಗಳೂರಿನಿಂದ ತೆಗೆದುಕೊಂಡು ಬಂದು ಮಂಗಳೂರಿನ ವಿದ್ಯಾರ್ಥಿಗಳಿಗೆ ಸರಬರಾಜು ಮಾಡುತ್ತಿದ್ದ ಕೇರಳದ ಎರ್ನಾಕುಳಂ ಜಿಲ್ಲೆ ಮಟ್ಟಾಂಚೇರಿಯ ನಝೀರ್ ಅಹಮ್ಮದ್ ಖಾನ್ ಅವರ ಮಗ, ದೇರಳಕಟ್ಟೆಯಲ್ಲಿ ವಾಸವಾಗಿರುವ ಮಹಮ್ಮದ್ ಅರ್ಷದ್ ಖಾನ್ (29) ಎಂಬಾತನನ್ನು ಸಿಸಿಬಿ ಪೊಲೀಸರು ದೇರಳಕಟ್ಟೆಯಲ್ಲಿ ಶುಕ್ರವಾರ ಬಂಧಿಸಿದ್ದಾರೆ.
ಈತನಿಂದ 53.29 ಗ್ರಾಂ ಎಂಡಿಎಂಎ, 2.33 ಗ್ರಾಂ ಹೈಡ್ರೋವಿಡ್ ಗಾಂಜಾ ಮತ್ತು 45 ಗ್ರಾಂ ಎಂಡಿಎಂಎ ಪಿಲ್ಸ್ ವಶಪಡಿಸಿಕೊಳ್ಳಲಾಗಿದೆ. ₹ 10 ಲಕ್ಷದ 85 ಸಾವಿರ ಮೌಲ್ಯದ ಮಾದಕ ಪದಾರ್ಥ ಸೇರಿದಂತೆ ಒಟ್ಟು ₹ 11,5,500 ಮೌಲ್ಯದ ವಸ್ತುಗಳು ಆತನಿಂದ ಲಭಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.