ಸಾವು (ಪ್ರಾತಿನಿಧಿಕ ಚಿತ್ರ)
ಕಾಸರಗೋಡು: ಮೊಗ್ರಾಲ್ ಪುತ್ತೂರಿನಲ್ಲಿ ಗುರುವಾರ ರಾಷ್ಟ್ರೀಯ ಹೆದ್ದಾರಿ ಬದಿ ದಾರಿದೀಪ ಅಳವಡಿಸುತ್ತಿದ್ದ ವೇಳೆ ಕ್ರೇನ್‌ನ ಬಕೆಟ್ ತುಂಡಾಗಿ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.
ವಡಗರ ಮಣಿಯೂರು ನಿವಾಸಿ ಅಶ್ವಿನ್ (27) ಮತ್ತು ಮಾಡಾಪಳ್ಳಿ ನಿವಾಸಿ ಅಕ್ಷಯ್ (25) ಮೃತಪಟ್ಟವರು.
ತಲಪ್ಪಾಡಿಯಿಂದ ಚೆಂಗಳವರೆಗಿನ ಪ್ರಥಮ ರೀಚ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ದೀಪ ಅಳವಡಿಸುವ ವೇಳೆ ಅವಘಡ ನಡೆದಿದೆ. ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.