ಮಂಗಳೂರು: ನೆರೆಯ ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಂಡುಬಂದಿದೆ. 128 ಜನರಿಗೆ ಕೋವಿಡ್ ಸೋಂಕು ತಗುಲಿರುವುದು ಬುಧವಾರ ದೃಢಪಟ್ಟಿದೆ.
‘ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 119, ವಿದೇಶಗಳಿಂದ ವಾಪಸಾಗಿರುವ ಐವರು, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಿಂದ ಹಿಂದಿರುಗಿರುವ ತಲಾ ಇಬ್ಬರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. 11 ಮಂದಿಗೆ ಯಾವ ಮೂಲದಿಂದ ಸೋಂಕು ತಗುಲಿದೆ ಎಂಬುದನ್ನು ಪತ್ತೆಹಚ್ಚಲಾಗುತ್ತಿದೆ’ ಎಂದು ಕಾಸರಗೋಡು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದ್ದಾರೆ.
ಒಂದು ಸಾವು ಘೋಷಣೆ
ಕಾಸರಗೋಡು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 76 ವರ್ಷದ ವ್ಯಕ್ತಿ ಆಗಸ್ಟ್ 1ರಂದು ಮೃತಪಟ್ಟಿರುವುದನ್ನು ಅಲ್ಲಿನ ಆರೋಗ್ಯ ಇಲಾಖೆ ಬುಧವಾರ ಘೋಷಿಸಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು ಏಳು ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.