ಸಾವು
ಪ್ರಾತಿನಿಧಿಕ ಚಿತ್ರ
ಕಾಸರಗೋಡು: ಅಂಬಲತ್ತರ ಪರಕ್ಕಳಾಯಿ ಒಡಂಪುಳಿಕ್ಕಾಲ್ ಎಂಬಲ್ಲಿ ಗುರುವಾರ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿದ ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೋಪಿ (60), ಪತ್ನಿ ಇಂದಿರಾ (57) ಮತ್ತು ಪುತ್ರ ರಾಜೇಶ್ (22) ಮೃತಪಟ್ಟವರು. ಇನ್ನೊಬ್ಬ ಪುತ್ರ ರಾಕೇಶ್ ಅವರ ಸ್ಥಿತಿ ಗಂಭೀರವಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ 4 ಮಂದಿಯನ್ನು ಸಾರ್ವಜನಿಕರು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೂವರು ಮೃತಪಟ್ಟಿದ್ದರು. ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಅಂಬಲತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.