ADVERTISEMENT

ಕಾಂತಾವರ ದತ್ತಿನಿಧಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2020, 21:13 IST
Last Updated 18 ನವೆಂಬರ್ 2020, 21:13 IST
ಮುರಳಿ ಕಡೆಕಾರು
ಮುರಳಿ ಕಡೆಕಾರು   

ಮಂಗಳೂರು: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ದಂಪತಿ ಕೆ. ಬಾಲಕೃಷ್ಣ ಆಚಾರ್ಯ ಮತ್ತು ವಾಣಿ ಬಿ.ಆಚಾರ್ಯ ಅವರ ನೆನಪಿನಲ್ಲಿ ಕಾಂತಾವರ ಕನ್ನಡ ಸಂಘ ನೀಡುವ ದತ್ತಿನಿಧಿ ಪ್ರಶಸ್ತಿಗೆ ಈ ಬಾರಿ ಉಡುಪಿಯ ನಿವೃತ್ತ ಮುಖ್ಯಶಿಕ್ಷಕ ಮುರಳಿ ಕಡೆಕಾರು ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹ 10 ಸಾವಿರ ಗೌರವ ಸಂಭಾವನೆ, ತಾಮ್ರಪತ್ರ ಮತ್ತು ಸನ್ಮಾನ
ವನ್ನು ಒಳಗೊಂಡಿದೆ. ಡಿಸೆಂಬರ್ 13ರಂದು ಕಾಂತಾವರ ಕನ್ನಡ ಸಂಘದ ಉಳಿದ ವಾರ್ಷಿಕ ಪ್ರಶಸ್ತಿಗಳ ಜೊತೆ ‍ಇದನ್ನೂ ಪ್ರದಾನ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷ ನಿರಂಜನ ಮೊಗಸಾಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT