ADVERTISEMENT

ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ‌ಮಲಯಾಳ ಕಡ್ಡಾಯ: ಕೇರಳ ವಿಧಾನಸಭೆ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2025, 20:00 IST
Last Updated 10 ಅಕ್ಟೋಬರ್ 2025, 20:00 IST
<div class="paragraphs"><p>ಕೇರಳ ಪಿಣರಾಯಿ ವಿಜಯನ್‌</p></div>

ಕೇರಳ ಪಿಣರಾಯಿ ವಿಜಯನ್‌

   

ಕೃಪೆ: ಪಿಟಿಐ

ಕಾಸರಗೋಡು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಒಂದರಿಂದ ಹತ್ತನೇ ತರಗತಿವರೆಗೆ ಮಲಯಾಳಂ ಕಡ್ಡಾಯಗೊಳಿಸುವ ವಿಧೇಯಕಕ್ಕೆ ಕೇರಳ ವಿಧಾನಸಭೆ ಶುಕ್ರವಾರ ಒಪ್ಪಿಗೆ ನೀಡಿದೆ.

ADVERTISEMENT

ಹೊರರಾಜ್ಯಗಳಲ್ಲಿ ಕಲಿತು ಕೇರಳದಲ್ಲಿ 9 ಮತ್ತು 10ನೇ ತರಗತಿಗೆ ಸೇರುವ ವಿದ್ಯಾರ್ಥಿಗಳಿಗೆ ಮಲಯಾಳಂ ಕಲಿಕೆ ಕಡ್ಡಾಯವಲ್ಲ ಎಂದು ತಿಳಿಸಲಾಗಿದೆ. ಕಾನೂನು ಸಚಿವ ಪಿ.ರಾಜೀವನ್ ಈ ಮಸೂದೆಯನ್ನು ಮಂಡಿಸಿದ್ದರು.

ಕಾಸರಗೋಡು ಜಿಲ್ಲೆಯ ಕನ್ನಡ ಭಾಷಾ ಅಲ್ಪಸಂಖ್ಯಾತರು ಮತ್ತು ಇಡುಕ್ಕಿ ಜಿಲ್ಲೆಯ ತಮಿಳು ಭಾಷಾ ಅಲ್ಪಸಂಖ್ಯಾತರು ಈ ನಿಯಮದಿಂದ ಎದುರಿಸಬಹುದಾದ ತೊಂದರೆಗಳ ಬಗ್ಗೆ ವಿಧೇಯಕದಲ್ಲಿ ಪ್ರಸ್ತಾಪಿಸಿಲ್ಲ. ಇದರಿಂದ ಭಾಷಾ ಅಲ್ಪಸಂಖ್ಯಾತರಿಗೆ ಆತಂಕ ಉಂಟಾಗಿದೆ ಎಂದು ಕನ್ನಡಪರ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.