ADVERTISEMENT

ಶಿಕ್ಷಣದ ಜೊತೆಗೆ ಭಾರತೀಯ ಸಂಸ್ಕೃತಿ ಬೆಳೆಸಿ: ಕಿಶೋರ್ ಕುಮಾರ್ ಪುತ್ತೂರು

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2025, 5:36 IST
Last Updated 17 ಅಕ್ಟೋಬರ್ 2025, 5:36 IST
ಬೆಳ್ತಂಗಡಿ ವಾಣಿ ಶಾಲೆಯಲ್ಲಿ ಮಕ್ಕಳ ಆಟದ ಮನೆಯನ್ನು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಉದ್ಘಾಟಿಸಿದರು
ಬೆಳ್ತಂಗಡಿ ವಾಣಿ ಶಾಲೆಯಲ್ಲಿ ಮಕ್ಕಳ ಆಟದ ಮನೆಯನ್ನು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಉದ್ಘಾಟಿಸಿದರು   

ಬೆಳ್ತಂಗಡಿ: ‘ತಾಯಿಗೆ ಜಗತ್ತಿನಲ್ಲಿ ಶ್ರೇಷ್ಠ ಸ್ಥಾನವನ್ನು ನೀಡುವ ಭಾರತದ ಪರಂಪರೆ ಬೆಳೆಯಬೇಕು. ಅದಕ್ಕಾಗಿ ಮಕ್ಕಳಲ್ಲಿ ಶಿಕ್ಷಣದ ಜತೆಗೆ ಪೋಷಕರು ಸಂಸ್ಕಾರವನ್ನೂ ಕಲಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಹೇಳಿದರು.

ಇಲ್ಲಿನ ಹಳೆಕೋಟೆ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ‘ವಾಣಿ ಮಕ್ಕಳ ಆಟದ ಮನೆ’ ಉದ್ಘಾಟಿಸಿ ಅವರು ಮಾತನಾಡಿದರು.

ವಾಣಿ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷ ಎಚ್.ಪದ್ಮ ಗೌಡ ಮಾತನಾಡಿ, ಮಕ್ಕಳ ದೈಹಿಕ, ಮಾನಸಿಕ ಬೆಳವಣಿಗೆ ಆಟ ಅಗತ್ಯವಾಗಿದ್ದು, ಅದನ್ನು ಸಂಸ್ಥೆ ಈಡೇರಿಸಿದೆ. ಪೋಷಕರು ಮಕ್ಕಳ ಶಿಕ್ಷಣದ ಕಡೆಗೆ ಗಮನಹರಿಸಿ ಸಾಧ್ಯವಾದಷ್ಟು ಮೊಬೈಲ್ ಬಳಕೆಯಿಂದ ದೂರವಿರಿಸಿ ಎಂದರು.

ADVERTISEMENT

ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ವಹಿಸಿದ್ದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯಾನಂದ ಗೌಡ, ಕಳಿಯ ಸೇವಾ ಸಹಕಾರ ಸಂಘದ ನಿರ್ದೇಶಕ ಬಾಲಕೃಷ್ಣಗೌಡ ಬಿರ್ಮೊಟ್ಟು, ತಾಲ್ಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಕೊಶಾಧಿಕಾರಿ ಯುವರಾಜ್ ಅನಾರ್, ಜತೆ ಕಾರ್ಯದರ್ಶಿ ಶ್ರೀನಾಥ್ ಕೆ.ಎಂ., ಮಾಜಿ ಅಧ್ಯಕ್ಷ ಸೋಮೇಗೌಡ, ಆಡಳಿತಾಧಿಕಾರಿ ಪ್ರಸಾದ್, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶೇಖರ್ ಶೆಟ್ಟಿ, ಉಪಾಧ್ಯಕ್ಷೆ ಚಿತ್ರಲೇಖ, ನಿರ್ದೇಶಕರಾದ ವಿಜಯ ಗೌಡ ನ್ಯಾಯತರ್ಪು, ದಿನೇಶ್ ಗೌಡ ಕೊಯ್ಯೂರು, ಮಾಧವ ಗೌಡ, ವಸಂತ ಗೌಡ, ಡಿ.ಎಂ.ಗೌಡ, ಉಷಾದೇವಿ ವೆಂಕಟ್ರಮಣ ಗೌಡ, ಭವಾನಿ ಕಾಂತಪ್ಪಗೌಡ ಭಾಗವಹಿಸಿದ್ದರು.

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಶಿಕ್ಷಕ ಲಕ್ಷ್ಮೀನಾರಾಯಣ ಸ್ವಾಗತಿಸಿ, ಶಿಕ್ಷಕಿ ಮೋಹನಾಂಗಿ ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಸುಹಾಸಿನಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.