ADVERTISEMENT

ಕೊಣಾಜೆ: ಕರ್ತವ್ಯ ನಿರತ ಹೆಡ್‌ ಕಾನ್‌ಸ್ಟೆಬಲ್‌ ಜಗನ್ನಾಥ ಹೃದಯಾಘಾತದಿಂದ ನಿಧನ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2022, 8:18 IST
Last Updated 6 ಆಗಸ್ಟ್ 2022, 8:18 IST
ಹೆಡ್‌ ಕಾನ್‌ಸ್ಟೆಬಲ್‌ ಜಗನ್ನಾಥ
ಹೆಡ್‌ ಕಾನ್‌ಸ್ಟೆಬಲ್‌ ಜಗನ್ನಾಥ   

ಮಂಗಳೂರು: ಕೊಣಾಜೆ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ಜಗನ್ನಾಥ (44) ಅವರು ಹೃದಯಾಘಾತದಿಂದ ಶನಿವಾರ ನಿಧನರಾದರು.

ಕರ್ತವ್ಯ ನಿರತರಾಗಿದ್ದ ಅವರಿಗೆ ದಿಢೀರ್‌ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಕಣಚೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದರು ಎಂದು ನಗರ ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌ ತಿಳಿಸಿದರು.

ಪುತ್ತೂರು ತಾಲ್ಲೂಕಿನ ಸವಣೂರು ಗ್ರಾಮದ ಜಗನ್ನಾಥ ಅವರು 2000ರಲ್ಲಿ ಪೊಲೀಸ್‌ ಇಲಾಖೆಗೆ ಸೇರಿದ್ದರು.

ADVERTISEMENT

ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.