
ಮಂಗಳೂರು: ಬಿಡುಗಡೆಗೆ ಸಿದ್ಧವಾಗಿರುವ, ಸುಧೀರ್ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಸಿನಿಮಾ ಜನರಲ್ಲಿ ಆಸಕ್ತಿ ಮೂಡಿಸುತ್ತಿದೆ. ನಶಿಸಿ ಹೋಗುತ್ತಿರುವ ಪುರಾತನ ಸಂಸ್ಕೃತಿ, ಕಲೆಯನ್ನು ಈ ಸಿನಿಮಾ ಎತ್ತಿಹಿಡಿಯುತ್ತಿರುವುದು ಸಂತೋಷ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು.
ನ.11ರಂದು ಸಿನಿಮಾ ತಾರೆಯರ ಸಮ್ಮುಖದಲ್ಲಿ ನಡೆಯಲಿರುವ ಕೊರಗಜ್ಜ ದೈವದ ಅದ್ಧುರಿ ಕೋಲ ಸೇವೆಯ ಬಗ್ಗೆ ಚರ್ಚಿಸಲು ಚಿತ್ರ ತಂಡ ಬೆಂಗಳೂರಿನಲ್ಲಿ ಭೇಟಿ ಮಾಡಿದ ವೇಳೆ ಅವರು ಮಾತನಾಡಿದರು.
‘ಕೆಲ ಸ್ಥಳಿಯ ಕಿಡಿಗೇಡಿಗಳು ಒಡ್ಡುತ್ತಿರುವ ಬೆದರಿಕೆ ಮತ್ತು ಚಿತ್ರೀಕರಣದ ವೇಳೆ ನಡೆದ ದಾಳಿಗಳ ಹಿನ್ನೆಲೆಯಲ್ಲಿ ಗೃಹ ಸಚಿವರನ್ನು ಭೇಟಿ ಮಾಡಲಾಯಿತು’ ಎಂದು ಚಿತ್ರತಂಡದವರು ತಿಳಿಸಿದ್ದಾರೆ.
ನಿರ್ದೇಶಕ ಸುಧೀರ್ ಅತ್ತಾವರ್, ನಟಿ ಭವ್ಯಾ ನಿರ್ಮಾಪಕ ತ್ರಿವಿಕ್ರಂ, ಕಾರ್ಯಕಾರಿ ನಿರ್ಮಾಪಕ ವಿದ್ಯಾಧರ್ ಶೆಟ್ಟಿ, ವಿಶೇಷ ಭದ್ರತೆ ಬಗ್ಗೆ ಮನವಿ ಮಾಡಿಕೊಂಡರು. ಗೃಹ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿ, ಮಂಗಳೂರಿನ ಪೋಲಿಸ್ ಕಮಿಷನರ್ ಜೊತೆ ವಿಷಯ ಪ್ರಸ್ತಾಪಿಸಿದರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.