ADVERTISEMENT

ನಾರಾಯಣ ಗುರು ಸಾಮಾಜಿಕ ಸುಧಾರಣೆಯ ಹರಿಕಾರ: ಉಪನ್ಯಾಸಕ ನವೀನ್ ಆನೆದಿಬ್ಬ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2025, 6:51 IST
Last Updated 8 ಸೆಪ್ಟೆಂಬರ್ 2025, 6:51 IST
ಬಣಕಲ್‌ನಲ್ಲಿ ಮಲೆಯಾಳಿ ಸಂಘದಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು
ಬಣಕಲ್‌ನಲ್ಲಿ ಮಲೆಯಾಳಿ ಸಂಘದಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು   

ಕೊಟ್ಟಿಗೆಹಾರ: ಸಾಮಾಜಿಕ ಸುಧಾರಣೆಯ ಹರಿಕಾರರಾಗಿದ್ದ ಬ್ರಹ್ಮಶ್ರಿ ನಾರಾಯಣಗುರುಗಳ ಚಿಂತನೆ ಸಮಾಜ ಸುಧಾರಣೆಗೆ ಪೂರಕವಾಗಿದ್ದು, ಅವುಗಳನ್ನು ಅಳವಡಿಸಿಕೊಳ್ಳಬೇಕು ಎಂದು ಉಪನ್ಯಾಸಕ ನವೀನ್ ಆನೆದಿಬ್ಬ ಹೇಳಿದರು.

ಬಣಕಲ್ ಸಮೀಪದ ಹಿರೇಬೈಲ್‍ನ ಬ್ರಹ್ಮಶ್ರೀ ನಾರಾಯಣಗುರು ಮಲೆಯಾಳಿ ಸಂಘದಿಂದ ಬಣಕಲ್‌ನಲ್ಲಿ ಹಮ್ಮಿಕೊಂಡಿದ್ದ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಾರಾಯಣಗುರುಗಳ ಕ್ರಾಂತಿಕಾರಿ ನಡೆ ಎಲ್ಲ ಸಮುದಾಯಕ್ಕೂ ಪ್ರಸ್ತುತವಾಗಿದೆ. ಹಲವು ಧರ್ಮಗಳು ಒಟ್ಟಾಗಿ ಜೀವಿಸುವ ಹಾಗೂ ದೇಶದ ಅಖಂಡತೆಯನ್ನು ಪ್ರತಿಪಾದಿಸುವ ಚಿಂತನೆ ಅವರ ತತ್ವದಲ್ಲಿ ಅಡಗಿದೆ ಎಂದರು.

ADVERTISEMENT

ಬ್ರಹ್ಮಶ್ರೀ ನಾರಾಯಣಗುರು ಮಲೆಯಾಳಿ ಸಂಘದ ಅಧ್ಯಕ್ಷ ರಾಮಚಂದ್ರ ಮಾತನಾಡಿ, ನಾರಾಯಣಗುರುಗಳ ಜಯಂತಿಯ ಜತೆಗೆ ಜಗತ್ತನ್ನು ಒಂದೇ ಜಾತಿ ಒಂದೇ ಮತ ಒಂದೇ ಧರ್ಮದಲ್ಲಿ ಕಂಡ ಅವರ ವ್ಯಕ್ತಿತ್ವವನ್ನು ನೆನಪಿಸುವುದು ಹಾಗೂ ಅವರ ತತ್ವ ಆದರ್ಶಗಳನ್ನು ಪಾಲನೆ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.

ಹೂವಿನ ರಂಗೋಲಿ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದ ಪದಾಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.