
ಪ್ರಜಾವಾಣಿ ವಾರ್ತೆ
ವಿಟ್ಲ: ಪೆರುವಾಯಿ ಸಮೀಪ ಮುಳಿಯ ಎಂಬಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಓಮ್ನಿ ನಡುವೆ ಅಪಘಾತ ಸಂಭವಿಸಿದ್ದು, ಓಮ್ನಿ ಚಾಲಕ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಮೋನಪ್ಪ ಕುಲಾಲ್ ಮೈರ ಮೃತಪಟ್ಟ ಚಾಲಕ.
ವಿಟ್ಲದಿಂದ ಪೆರುವಾಯಿ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರು ಮತ್ತು ಪಕಳಕುಂಜದಿಂದ ವಿಟ್ಲ ಕಡೆಗೆ ಬರುತ್ತಿದ್ದ ಬಸ್ ಮುಳಿಯ ಎಂಬಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಚಾಲಕ ಮೋನಪ್ಪ ಕುಲಾಲ್ ಮೃತಪಟ್ಟರೆ, ಪತ್ನಿ ಲಲಿತಾ ಮತ್ತು ರಮಣಿ ಅವರನ್ನು ಸ್ಥಳೀಯರು ಆಂಬುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ.
ವಿಟ್ಲ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.