ADVERTISEMENT

ಸುಳ್ಯದಲ್ಲಿ ಬಸ್ ಸಂಚಾರ ಸಮಸ್ಯೆ: ಎಬಿವಿಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2026, 4:15 IST
Last Updated 4 ಜನವರಿ 2026, 4:15 IST
ಸುಳ್ಯದಲ್ಲಿ ಬಸ್ ಸಂಚಾರ ಸಮಸ್ಯೆ ಬಗ್ಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು
ಸುಳ್ಯದಲ್ಲಿ ಬಸ್ ಸಂಚಾರ ಸಮಸ್ಯೆ ಬಗ್ಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು   

ಸುಳ್ಯ: ತಾಲ್ಲೂಕಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಮಸ್ಯೆ ಖಂಡಿಸಿ ಎಬಿವಿಪಿ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ವತಿಯಿಂದ ಸುಳ್ಯ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಶನಿವಾರ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಎಬಿವಿಪಿ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ಮುಳಿಯ ಸಾತ್ವಿಕ್, ಕೆಎಸ್ಆರ್‌ಟಿಸಿ ಬಸ್ ಸಮಸ್ಯೆಯಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗುತ್ತಿದೆ ಎಂದು ಹೇಳಿದರು.

ಗ್ರಾಮೀಣ ಭಾಗಗಳಿಂದ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ದಿನನಿತ್ಯ ಸಂಕಷ್ಟ ಎದುರಿಸುತ್ತಿದ್ದು, ಅದಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದು ಸರಿಯಲ್ಲ. ಬಸ್ ಸಮಸ್ಯೆ ಪರಿಹಾರವಾಗುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.

ADVERTISEMENT

ಪಟ್ಟಣ ಕಾರ್ಯದರ್ಶಿ ಪುನಿತ್ ಎಚ್.ಮಾತನಾಡಿದರು.

ಪ್ರಮುಖರಾದ ಪ್ರೀತೇಶ್ ಕಣೆಮರಡ್ಕ, ಶ್ರೀಶರಣ್ ಮೊಗ್ರ, ಅಮಿತ್ ನಾಯಕ್, ಹೋರಾಟ ಪ್ರಮುಖ್ ಕೀರ್ತನ್, ಮಾನ್ವಿತ್ ಭಾಗವಹಿಸಿದ್ದರು. ನಂತರ ಅಧಿಕಾರಿಗಳಿಗೆ ಮನವಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.