ADVERTISEMENT

ಕುದ್ರೋಳಿ ಗಣೇಶ್ 'ಗೋಲ್ಡನ್ ಮ್ಯಾಜಿಷಿಯನ್’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2025, 7:47 IST
Last Updated 17 ಮಾರ್ಚ್ 2025, 7:47 IST
ವಿಶಾಖಪಟ್ಟಣದಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಕುದ್ರೋಳಿ ಗಣೇಶ್ ಅವರಿಗೆ ‘ಗೋಲ್ಡನ್ ಮ್ಯಾಜಿಷಿಯನ್’ ರಾಷ್ಟ್ರೀಯ ಜಾದೂ ಪ್ರಶಸ್ತಿಯನ್ನು ಸಂಸದ ಶ್ರೀಭರತ್ ಮುತ್ತುಕುಮುಲಿ ಪ್ರಶಸ್ತಿ ಪ್ರದಾನ ಮಾಡಿದರು. ಬಿ.ಎಸ್.ರೆಡ್ಡಿ ಭಾಗವಹಿಸಿದ್ದರು.
ವಿಶಾಖಪಟ್ಟಣದಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಕುದ್ರೋಳಿ ಗಣೇಶ್ ಅವರಿಗೆ ‘ಗೋಲ್ಡನ್ ಮ್ಯಾಜಿಷಿಯನ್’ ರಾಷ್ಟ್ರೀಯ ಜಾದೂ ಪ್ರಶಸ್ತಿಯನ್ನು ಸಂಸದ ಶ್ರೀಭರತ್ ಮುತ್ತುಕುಮುಲಿ ಪ್ರಶಸ್ತಿ ಪ್ರದಾನ ಮಾಡಿದರು. ಬಿ.ಎಸ್.ರೆಡ್ಡಿ ಭಾಗವಹಿಸಿದ್ದರು.   

ಮಂಗಳೂರು: ಆಂಧ್ರಪ್ರದೇಶದ ಇಂಡಿಯನ್ ಮ್ಯಾಜಿಕ್ ಅಸೋಸಿಯೇಶನ್ (ಐಎಂಎ) ಸಂಸ್ಥೆಯು ನಗರದ ಜಾದೂ ಕಲಾವಿದ ಕುದ್ರೋಳಿ ಗಣೇಶ್ ಅವರಿಗೆ ‘ಗೋಲ್ಡನ್ ಮ್ಯಾಜಿಷಿಯನ್’ ರಾಷ್ಟ್ರೀಯ ಜಾದೂ ಪ್ರಶಸ್ತಿ ನೀಡಿ ಗೌರವಿಸಿದೆ.

30ಕ್ಕೂ ಹೆಚ್ಚು ವರ್ಷಗಳಿಂದ ಜಾದೂ ರಂಗದಲ್ಲಿರುವ ಕುದ್ರೋಳಿ ಗಣೇಶ್ 11 ರಾಷ್ಟ್ರೀಯ ಜಾದೂ ಪ್ರಶಸ್ತಿ ಗೆದ್ದಿದ್ದಾರೆ. 15 ರಾಷ್ಟ್ರಗಳಲ್ಲಿ 2,300 ಕ್ಕೂ ಹೆಚ್ಚು ಜಾದೂ ಪ್ರದರ್ಶನ ನೀಡಿದ ಹೆಗ್ಗಳಿಕೆ ಅವರದು.  ಜಾದೂ, ಜಾನಪದ, ರಂಗಭೂಮಿ, ಸಂಗೀತಗಳ ಸಮ್ಮಿಳನದ ನವರಸಪೂರ್ಣ ಜಾದೂ ಶೈಲಿಯನ್ನು ಹುಟ್ಟುಹಾಕಿದ್ದಾರೆ. ತುಳುನಾಡು ಜಾದೂ, ತುಳುನಾಡು ತುಡರ್ ಚೆಂಡು, ಹರಿಕಥೆ ಜಾದೂ, ನವದುರ್ಗಾ ವಿಸ್ಮಯ, ಸ್ವಚ್ಛತೆಗಾಗಿ ಜಾದೂ, ಶಿಕ್ಷಣಕ್ಕಾಗಿ ಜಾದೂ, ಮೈಂಡ್ ಮ್ಯಾಜಿಕ್ ಮುಂತಾದ  ನವೀನ ಜಾದೂ ಪ್ರಯೋಗಗಳ ಜನಪ್ರಿಯರಾಗಿದ್ದಾರೆ.

ಗಣೇಶ್‌ ಅವರ ಸೃಜನಾತ್ಮಕ ಪ್ರಯೋಗಗಳನ್ನು ಗುರುತಿಸಿ, ಜೀವಿತಾವಧಿಯ ಸಾಧನೆಗಾಗಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆಮಾಡಲಾಗಿದೆ. ಆಂಧ್ರಪದೇಶದ ವಿಶಾಖಪಟ್ಟಣದಲ್ಲಿ ರಾಷ್ಟ್ರೀಯ ಜಾದೂ ದಿನಾಚರಣೆಯ ಪ್ರಯುಕ್ತ ಈಚೆಗೆ ಏರ್ಪಡಿಸಿದ್ದ ಸಮಾರಂಭದಲ್ಲಿ ವಿಶಾಖಪಟ್ಟಣ ಸಂಸದ ಶ್ರೀಭರತ್ ಮುತ್ತುಕುಮುಲಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಐಎಂಎ ಅಧ್ಯಕ್ಷ ಜಾದೂಗಾರ ಬಿ.ಎಸ್.ರೆಡ್ಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ADVERTISEMENT

ಪ್ರಶಸ್ತಿ ಸ್ವೀಕರಿಸಿದ ಕುದ್ರೋಳಿ ಗಣೇಶ್, ‘ಬದಲಾದ ಅಭಿರುಚಿಗೆ ಹೊಂದುವಂತೆ ಪ್ರದರ್ಶನದಲ್ಲಿ ಹೊಸತನವನ್ನು ಜೋಡಿಸಿಕೊಳ್ಳೊಣ. ಬೆಳವಣಿಗೆ ದೃಷ್ಟಿಯಿಂದ ಜಾದೂ ಕಲೆಗೆ ಸಾಂಸ್ಥಿಕ ರೂಪ ನೀಡುವ ಅಗತ್ಯವಿದೆ. ಈ ಬಗ್ಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.