ADVERTISEMENT

ಕುದ್ರೋಳಿ ಗಣೇಶ್‌ಗೆ ಗೋಲ್ಡನ್ ಮ್ಯಾಜಿಷಿಯನ್ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2025, 7:57 IST
Last Updated 15 ಮಾರ್ಚ್ 2025, 7:57 IST
ವಿಶಾಖಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಾದೂಗಾರ ಕುದ್ರೋಳಿ ಗಣೇಶ್ ಅವರು ಗೋಲ್ಡನ್ ಮ್ಯಾಜಿಷಿಯನ್ ಪ್ರಶಸ್ತಿ ಸ್ವೀಕರಿಸಿದರು
ವಿಶಾಖಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಾದೂಗಾರ ಕುದ್ರೋಳಿ ಗಣೇಶ್ ಅವರು ಗೋಲ್ಡನ್ ಮ್ಯಾಜಿಷಿಯನ್ ಪ್ರಶಸ್ತಿ ಸ್ವೀಕರಿಸಿದರು   

ಮಂಗಳೂರು: ಆಂಧ್ರಪ್ರದೇಶದ ಇಂಡಿಯನ್ ಮ್ಯಾಜಿಕ್ ಅಸೋಸಿಯೇಷನ್ (ಐಎಂಎ) ಮಂಗಳೂರಿನ ಜಾದೂ ಕಲಾವಿದ ಕುದ್ರೋಳಿ ಗಣೇಶ್ ಅವರಿಗೆ ಗೋಲ್ಡನ್ ಮ್ಯಾಜಿಷಿಯನ್ ರಾಷ್ಟ್ರೀಯ ಜಾದೂ ಪ್ರಶಸ್ತಿ ನೀಡಿ ಗೌರವಿಸಿದೆ.

ಕುದ್ರೋಳಿ ಗಣೇಶ್ ಜಾದೂ ಕ್ಷೇತ್ರದಲ್ಲಿ ಮಾಡಿರುವ ಸೃಜನಾತ್ಮಕ ಪ್ರಯೋಗಗಳನ್ನು ಗುರುತಿಸಿ ಜೀವಿತಾವಧಿಯ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗಿದೆ. ವಿಶಾಖಪಟ್ಟಣದಲ್ಲಿ ನಡೆದ ರಾಷ್ಟ್ರೀಯ ಜಾದೂ ದಿನಾಚರಣೆಯಲ್ಲಿ ವಿಶಾಖಪಟ್ಟಣದ ಸಂಸದ ಭರತ್ ಮುತ್ತುಕುಮುಲಿ ಪ್ರಶಸ್ತಿ ಪ್ರದಾನ ಮಾಡಿದರು.

ಕುದ್ರೋಳಿ ಗಣೇಶ್ ಮಾತನಾಡಿ, ಬದಲಾಗುತ್ತಿರುವ ಅಭಿರುಚಿಗೆ ಹೊಂದುವಂತೆ ಪ್ರದರ್ಶನದಲ್ಲಿ ಹೊಸತನವನ್ನು ಜೋಡಿಸಿಕೊಳ್ಳಬೇಕಾಗಿದೆ. ಜಾದೂ ಕಲೆಯ ಅಭಿವೃದ್ದಿಗಾಗಿ ಈ ಕಲೆಗೆ ಸಾಂಸ್ಥಿಕ ರೂಪ ದೊರೆಯಬೇಕಾಗಿದೆ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.