
ಪ್ರಜಾವಾಣಿ ವಾರ್ತೆ
ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಕ್ಯಾಲೆಂಡರ್ ಹೊಸ ವರ್ಷದ ಪ್ರಯುಕ್ತ ಗುರುವಾರ ವಿಶೇಷ ಗುರುಪೂಜೆ, ಗಣಪತಿ ಹೋಮ ಹಾಗು ರಥೋತ್ಸವ ನೆರವೇರಿತು.
ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಬಿ.ಜಿ.ಸುವರ್ಣ, ಸದಸ್ಯರಾದ ವೇದಕುಮಾರ್, ಪಿ.ಕೆ.ಗೌರವಿ, ರಾಧಾಕೃಷ್ಣ, ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಚಂದ್ರಶೇಖರ್ ಕಾವೂರು, ಜಯರಾಮ ಕಾರಂದೂರು, ಕದ್ರಿ ಮಂಜುನಾಥ ದೇವಸ್ಥಾನ ಟ್ರಸ್ಟಿ ರಾಜೇಂದ್ರ ಚಿಲಿಂಬಿ, ಅಶೋಕ್ ಕುಮಾರ್, ಗೋಕರ್ಣನಾಥ ಸೇವಾದಳ ಸದಸ್ಯರು ಇದ್ದರು. ಸಾವಿರಾರು ಭಕ್ತರು ಬೆಳ್ಳಿ ರಥ ಎಳೆದು ಪುನೀತರಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.