ಮಂಗಳೂರು: ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಲಲಿತಾ ಭಜನಾ ಮಂಡಳಿ ಮತ್ತು ವಿಶ್ವ ಬಿಲ್ಲವ ಮಹಿಳಾ ಸಂಘದ ಸಹಕಾರದಲ್ಲಿ ವೈಭವದ ವರಮಹಾಲಕ್ಷ್ಮಿ ಪೂಜೆ ಶುಕ್ರವಾರ ನಡೆಯಿತು.
ಬೆಳಿಗ್ಗೆ ಕಲಶ ಸ್ಥಾಪನೆ, ಅಭಿಷೇಕ, ಲಲಿತಾ ಸಹಸ್ರನಾಮ ಪಠಣ, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ನಡೆದವು. ಬೆಳಗಿನಿಂದಲೇ ಕ್ಷೇತ್ರದಲ್ಲಿ ಜನದಟ್ಟಣೆ ಇತ್ತು. ವರಮಹಾಲಕ್ಷ್ಮಿ ವ್ರತ ಕೈಗೊಂಡಿದ್ದ ಮಹಿಳೆಯರು ಪೂಜೆ ಸಲ್ಲಿಸಿದರು. ಲಲಿತಾ ಭಜನಾ ಮಂಡಳಿ ಮತ್ತು ವಿಶ್ವ ಬಿಲ್ಲವ ಮಹಿಳಾ ಸಂಘದಿಂದ ಮಾತೆಯರಿಗೆ ಬಾಗಿನ ನೀಡಲಾಯಿತು. ಅನ್ನದಾನದಲ್ಲಿ ಸಾವಿರಾರು ಮಂದಿ ಭಾಗವಹಿಸಿದರು.
ದೇವಸ್ಥಾನದ ಅಧ್ಯಕ್ಷರಾದ ಜೈರಾಜ್ ಎಚ್. ಸೋಮಸುಂದರಂ, ಉಪಾಧ್ಯಕ್ಷೆ ಉರ್ಮಿಳಾ ರಮೇಶ್ ಕುಮಾರ್, ಕಾರ್ಯದರ್ಶಿ ಮಾಧವ ಸುವರ್ಣ, ಟ್ರಸ್ಟಿಗಳಾದ ಎಚ್.ಎಸ್.ಸಾಯಿರಾಂ, ಜಗದೀಪ್ ಡಿ.ಸುವರ್ಣ, ಕೃತಿನ್ ಡಿ. ಅಮೀನ್, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಬಿ.ಜಿ. ಸುವರ್ಣ, ರವಿಶಂಕರ್ ಮಿಜಾರು, ಶೇಖರ್ ಪೂಜಾರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.