ADVERTISEMENT

ಕುದ್ರುಗಳ ಅಭಿವೃದ್ಧಿಗೆ ಚಿಂತನೆ: ಕಾಮತ್‌

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2020, 15:54 IST
Last Updated 31 ಅಕ್ಟೋಬರ್ 2020, 15:54 IST
ಮಂಗಳೂರಿನ ಸುತ್ತಲಿರುವ ಕುದ್ರುಗಳನ್ನು ಶಾಸಕ ವೇದವ್ಯಾಸ ಕಾಮತ್ ಹಾಗೂ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಶನಿವಾರ ಪರಿಶೀಲಿಸಿದರು.
ಮಂಗಳೂರಿನ ಸುತ್ತಲಿರುವ ಕುದ್ರುಗಳನ್ನು ಶಾಸಕ ವೇದವ್ಯಾಸ ಕಾಮತ್ ಹಾಗೂ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಶನಿವಾರ ಪರಿಶೀಲಿಸಿದರು.   

ಮಂಗಳೂರು: ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುದ್ರುಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕ ವೇದವ್ಯಾಸ ಕಾಮತ್ ಹಾಗೂ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ವೀಕ್ಷಣೆ ನಡೆಸಿದರು.

ಈ ಸಂದರ್ಭ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಯ ಕುರಿತು ಅನೇಕ ಯೋಚನೆಗಳಿವೆ. ಪ್ರಮುಖವಾಗಿ ಕುದ್ರುಗಳನ್ನು ಅಭಿವೃದ್ಧಿಪಡಿಸಿ ಪ್ರವಾಸೋದ್ಯಮವನ್ನು ಬೆಳೆಸುವ ಕಾರ್ಯದ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಲಾಗುವುದು ಎಂದು ಹೇಳಿದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ, ಮೇಯರ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಗಿದೆ ಎಂದರು.

ADVERTISEMENT

ಮೇಯರ್ ದಿವಾಕರ್ ಪಾಂಡೇಶ್ವರ, ಉಪ ವಿಭಾಗಾಧಿಕಾರಿ ರವಿಚಂದ್ರ, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪೂರ್ಣಿಮಾ, ಜಗದೀಶ್ ಶೆಟ್ಟಿ ಬೋಳೂರು, ಕಿರಣ್ ಕುಮಾರ್, ಸಚೇತಕ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.