ADVERTISEMENT

ಕುಡುಪು: ಯುವಕ ಸಾವು; ಕಾರಣ ನಿಗೂಢ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2025, 16:38 IST
Last Updated 27 ಏಪ್ರಿಲ್ 2025, 16:38 IST

ಮಂಗಳೂರು: ನಗರದ ಹೊರವಲಯದ ಕುಡುಪು ಕಟ್ಟೆ ಬಳಿ ಯುವಕನೊಬ್ಬನ ಮೃತದೇಹ ಭಾನುವಾರ ಪತ್ತೆಯಾಗಿದೆ. ಮೃತ ವ್ಯಕ್ತಿಯ ಗುರುತು ವಿಳಾಸ ಇನ್ನೂ ಪತ್ತೆಯಾಗಿಲ್ಲ. ಆತನ ಸಾವಿಗೆ ಕಾರಣವೇನೆಂಬುದು ನಿಗೂಢವಾಗಿದೆ.

‘ಸುಮಾರು 35ರಿಂದ 40 ವರ್ಷಗಳ ನಡುವಿನ ವ್ಯಕ್ತಿಯ ಮೃತದೇಹ ಕುಡುಪು ಬಳಿ ಪತ್ತೆಯಾಗಿದೆ. ಮೃತ ವ್ಯಕ್ತಿ ಯಾರು ಎಂದು ಇನ್ನಷ್ಟೇ ಪತ್ತೆ ಹಚ್ಚಬೇಕಿದೆ. ಆತನ ಸಾವಿಗೆ ಕಾರಣ ಏನು ಎಂದು ಗೊತ್ತಾಗಿಲ್ಲ. ಆತನ ಕೊಲೆ ಯಾಗಿದೆಯೇ ಎಂಬುದೂ ಖಚಿತವಾಗಿಲ್ಲ. ಮರಣೋತ್ತರ ಪರೀಕ್ಷೆಯ ವರದಿ ಕೈಸೇರಿದ ಬಳಿಕವೇ ವ್ಯಕ್ತಿಯ ಸಾವಿಗೆ ಕಾರಣ ಏನೆಂದು ಗೊತ್ತಾಗಲಿದೆ ಎಂದು ತಜ್ಞವೈದ್ಯರು ತಿಳಿಸಿದ್ದಾರೆ. ಹಾಗಾಗಿ ಸದ್ಯಕ್ಕೆ ಶಂಕಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದೇ. ತನಿಖೆ ಮುಂದುವರಿದಿದೆ’ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್‌ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಡಿಸಿಪಿ ಸಿದ್ದಾರ್ಥ್ ಗೋಯಲ್, ನಗರ ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.