ADVERTISEMENT

ಕುಕ್ಕೆ, ಧರ್ಮಸ್ಥಳ: ದೇವರ ದರ್ಶನಕ್ಕೆ ಮಾತ್ರ ಅವಕಾಶ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2021, 1:52 IST
Last Updated 5 ಆಗಸ್ಟ್ 2021, 1:52 IST
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ   

ಸುಬ್ರಹ್ಮಣ್ಯ: ಕೋವಿಡ್-19 ಹಿನ್ನೆಲೆ ಯಲ್ಲಿ ಜಿಲ್ಲಾಧಿಕಾರಿಯ ಆದೇಶದಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗುರುವಾರದಿಂದ ಆ.15ರ ತನಕ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಯಾವುದೇ ಸೇವೆಗಳಿಗೆ ಅವಕಾಶ ಇರುವುದಿಲ್ಲ. ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ಇರುವುದಿಲ್ಲ. ವಾರಾಂತ್ಯದ ಶನಿವಾರ ಮತ್ತು ಭಾನುವಾರ ದೇವರ ದರ್ಶನಕ್ಕೂ ‌‌ಅವಕಾಶ ನಿರ್ಬಂಧಿಸಲಾಗಿದೆ.

ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್-19 ಪ್ರಕರಣಗಳು ಅಧಿಕವಾಗಿರುವುದರಿಂದ ಭಕ್ತರ ಆರೋಗ್ಯ ಹಿತದೃಷ್ಟಿಯಿಂದ ಕುಕ್ಕೆಯಲ್ಲಿ ಗುರುವಾರದಿಂದ ಆ.15ರ ತನಕ ಕೇವಲ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬೆಳಿಗ್ಗೆ 7ರಿಂದ ಮಧ್ಯಾಹ್ನ 11.30 ತನಕ, ಮಧ್ಯಾಹ್ನ 12.15-1.30 ಹಾಗೂ 2.30ರಿಂದ ರಿಂದ ಸಂಜೆ 7.00 ತನಕ ಭಕ್ತರು ದೇವರ ದರ್ಶನ ಮಾಡಬಹುದು. ತೀರ್ಥಪ್ರಸಾದ, ಅನ್ನಪ್ರಸಾದ ವಿತರಣೆ ಇರುವುದಿಲ್ಲ. ಅಲ್ಲದೆ, ಯಾವುದೇ ಸೇವೆಗಳು ನಡೆಯುವುದಿಲ್ಲ. ವಾರಾಂತ್ಯ ದಿನಗಳನ್ನು ಹೊರತು ಪಡಿಸಿ ಇತರ ದಿನಗಳಲ್ಲಿ ವಸತಿ ಗೃಹದಲ್ಲಿ ತಂಗಲು ಅವಕಾಶವಿದೆ. ತಂಗುವ ಭಕ್ತರು 72 ಗಂಟೆಯೊಳಗೆ ಆರ್‌ಟಿಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರ ನೀಡಬೇಕು.

ADVERTISEMENT

ಏಕ ದ್ವಾರದ ಮೂಲಕ ಪ್ರವೇಶ: ದೇವಳದ ಮುಂಭಾಗದಲ್ಲಿ ಕಡ್ಡಾಯ ವಾಗಿ ದೇಹದ ಉಷ್ಣತೆ ತಪಾಸಣೆ ಮಾಡ
ಲಾಗುವುದು. ಅಲ್ಲದೆ, ಒಳ ಪ್ರವೇಶಿಸು ವಾಗ ಸ್ಯಾನಿಟೈಸರ್ ನೀಡಲಾಗುವುದು. ಜ್ವರ, ಕೆಮ್ಮು, ಶೀತವಿರುವ ಭಕ್ತರಿಗೆ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಿದೆ.

‘ವಾರಾಂತ್ಯದ ದಿನ ದರ್ಶನವೂ ಇಲ್ಲ’

ಉಜಿರೆ: ಜಿಲ್ಲಾಧಿಕಾರಿಯ ಆದೇಶದಂತೆ ಗುರುವಾರದಿಂದ ಇದೇ 15ರ ವರೆಗೆ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಯಾವುದೇ ಸೇವೆ, ಪೂಜೆಗಳು ನಡೆಯುವುದಿಲ್ಲ. ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಊಟ, ವಸತಿಗೆ ಅವಕಾಶ ವಿಲ್ಲ. ವಾರಾಂತ್ಯ ದಿನ ಭಕ್ತಾದಿಗಳಿಗೆ ದೇವರ ದರ್ಶನಕ್ಕೂ ಅವಕಾಶವಿಲ್ಲ. ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ದೇವರ ದರ್ಶನಕ್ಕೆ ಬೆಳಿಗ್ಗೆ ಗಂಟೆ 7 ರಿಂದ ಸಂಜೆ 7ರ ವರೆಗೆ ಮಾತ್ರ ಅವಕಾಶವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.