
ಪ್ರಜಾವಾಣಿ ವಾರ್ತೆ
ಸುಬ್ರಹ್ಮಣ್ಯ: ಇಲ್ಲಿನ ಪ್ರಸಿದ್ಧ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಮಹೋತ್ಸವದ ಆಮಂತ್ರಣ ಪತ್ರಿಕೆಯಲ್ಲಿ ಅನ್ಯಧರ್ಮಿಯರ ಹೆಸರು ಹಾಕಿರುವುದನ್ನು ಆಕ್ಷೇಪಿಸಿ ಕ್ಷೇತ್ರ ಸಂರಕ್ಷಣಾ ವೇದಿಕೆ ಪದಾಧಿಕಾರಿಗಳು ದೇವಸ್ಥಾನದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಅನ್ಯಧರ್ಮಿಯರ ಹೆಸರು ತೆಗೆಯದಿದ್ದಲ್ಲಿ ಡಿ.22ರಂದು ದೇವಸ್ಥಾನದ ಆಡಳಿತ ಕಚೇರಿ ಎದರು ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ದೇವಸ್ಥಾನದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಅವರು ಮನವಿ ಸ್ವೀಕರಿಸಿದರು. ಪ್ರಮುಖರಾದ ಚಿದಾನಂದ ಕಂದಡ್ಕ, ರಾಜೇಶ್ ಎನ್.ಎಸ್., ದಿನೇಶ್ ಸಂಪ್ಯಾಡಿ, ಅಚ್ಚುತ ಕುಕ್ಕಪ್ಪನ ಮನೆ, ಶ್ರೀಕುಮಾರ್ ಬಿಲದ್ವಾರ, ರಾಮಚಂದ್ರ ದೇವರಗದ್ದೆ, ದೀಲಿಪ್ ಉಪ್ಪಳಿಕೆ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.