ADVERTISEMENT

ಕುಕ್ಕೆ ಸುಬ್ರಹ್ಮಣ್ಯ: 78 ಭಕ್ತರಿಂದ ಎಡೆಸ್ನಾನ ಸೇವೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2024, 13:58 IST
Last Updated 5 ಡಿಸೆಂಬರ್ 2024, 13:58 IST
ಕುಕ್ಕೆ ದೇವಳದಲ್ಲಿ ಗುರುವಾರ 78 ಭಕ್ತರು ಎಡೆಸ್ನಾನ ಸೇವೆ ಸಲ್ಲಿಸಿದರು
ಕುಕ್ಕೆ ದೇವಳದಲ್ಲಿ ಗುರುವಾರ 78 ಭಕ್ತರು ಎಡೆಸ್ನಾನ ಸೇವೆ ಸಲ್ಲಿಸಿದರು   

ಸುಬ್ರಹ್ಮಣ್ಯ: (ದಕ್ಷಿಣ ಕನ್ನಡ): ಕುಕ್ಕೆ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಚೌತಿಯ ದಿನವಾದ ಗುರುವಾರ ಭಕ್ತರು ಎಡೆಸ್ನಾನ ಸೇವೆ ಸಲ್ಲಿಸಿದರು.

ಗೋವು ನೈವೇದ್ಯ ಸೇವಿಸಿದ ಎಲೆಯ ಮೇಲೆ ಭಕ್ತರು ಉರುಳು ಸೇವೆ ನಡೆಸಿ ಹರಕೆ ತೀರಿಸಿದರು. 78 ಭಕ್ತರು ಸ್ವಯಂಪ್ರೇರಿತರಾಗಿ ಸೇವೆ ನೆರವೇರಿಸಿದರು. ಪಂಚಮಿ ಮತ್ತು ಷಷ್ಠಿಯಂದೂ ಭಕ್ತರು ಎಡೆಸ್ನಾನ ಸೇವೆ ನೆರವೇರಿಸುವರು.

ಧಾರ್ಮಿಕ ದತ್ತಿ ಇಲಾಖೆಯ ಶೈವಾಗಮ ಪಂಡಿತರ ಮಾರ್ಗದರ್ಶನದಂತೆ ದೇವರ ಮಧ್ಯಾಹ್ನದ ಮಹಾಪೂಜೆ ಬಳಿಕ ದೇವಳದ ಹೊರಾಂಗಣದ ಸುತ್ತಲೂ 432 ಬಾಳೆ ಎಲೆಗಳನ್ನು ಹಾಕಿ ಅದರ ಮೇಲೆ ದೇವರ ನೈವೇದ್ಯ ಬಡಿಸಲಾಯಿತು. ಬಳಿಕ ದೇವಳದ ಗೋವುಗಳು ಆ ಎಲೆಗಳಲ್ಲಿದ್ದ ಅನ್ನಪ್ರಸಾದವನ್ನು ತಿಂದವು. ದೇವಳದ ಎದುರಿನ ದರ್ಪಣತೀರ್ಥ ನದಿಯಲ್ಲಿ ಸ್ನಾನ ಮಾಡಿ ನಿಂತಿದ್ದ ಭಕ್ತರು, ಗೋವುಗಳು ತಿಂದ ಎಲೆಯ ಮೇಲೆ ಉರುಳು ಸೇವೆ ಮಾಡುತ್ತಾ ಒಂದು ಸುತ್ತು ಪ್ರದಕ್ಷಿಣೆ ಹಾಕಿದರು. ಬಳಿಕ ಭಕ್ತರು ದರ್ಪಣ ತೀರ್ಥ ನದಿಯಲ್ಲಿ ಸ್ನಾನ ಮಾಡಿ ದೇವರ ಪ್ರಸಾದ ಮತ್ತು ಪ್ರಸಾದ ಭೋಜನ ಸ್ವೀಕರಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.